ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರ ಮೈಕ್ರೊ ಫೈನಾನ್ಸ್ ನಿಷೇಧಿಸಲಿ: ನಾಗಲಕ್ಷ್ಮಿ

Published : 24 ಸೆಪ್ಟೆಂಬರ್ 2024, 22:29 IST
Last Updated : 24 ಸೆಪ್ಟೆಂಬರ್ 2024, 22:29 IST
ಫಾಲೋ ಮಾಡಿ
Comments

ಮಳವಳ್ಳಿ (ಮಂಡ್ಯ ಜಿಲ್ಲೆ): ‘ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳಿಂದ ಜನರಿಗೆ ಕಿರುಕುಳ ಹೆಚ್ಚುತ್ತಿರುವುದರಿಂದ, ಅವುಗಳನ್ನು ಬಂದ್ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆಯುವೆ’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ, ತಾಲ್ಲೂಕಿನ ಮಲಿಯೂರಿನ ಮಹಾಲಕ್ಷ್ಮಿ ಅವರ ಮನೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಬಳಿಕ ಅವರು ಮಾತನಾಡಿ, ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸಾಲ ಪಡೆದಿದ್ದ ಮಹಾಲಕ್ಷ್ಮಿಯವರು, ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಕುಟುಂಬಕ್ಕೆ ಪರಿಹಾರ ಕೊಡಬೇಕು. ಮೈಕ್ರೋ ಫೈನಾನ್ಸ್‌ ನಿಷೇಧಿಸಬೇಕು’ ಎಂದು ಆಗ್ರಹಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ರೂಪಿಸಿದ್ದರೂ ಮೈಕ್ರೊ ಫೈನಾನ್ಸ್‌ಗಳ ಹಾವಳಿಯಿಂದ ಅವು ವಿಫಲವಾಗುತ್ತಿವೆ. ಗ್ರಾಮ ಪಂಚಾಯಿತಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾಲ ಮರುಪಾವತಿಗೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ಅಂಥ ಘಟನೆ ನಡೆದರೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು, ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಗೃಹಿಣಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಜತೆ ಶೀಘ್ರ ಸಭೆ ನಡೆಸಲಾಗುವುದು’ ಎಂದ ಅವರು, ಪಿಎಸ್ಐ ಡಿ.ರವಿಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಕೆ.ಅನಿತಾ ಅವರಿಂದ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT