ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ನಿಯಂತ್ರಣದ ನಂತರ ವೈರಮುಡಿ ಉತ್ಸವ: ಶಾಸಕ ಸಿ.ಎಸ್.ಪುಟ್ಟರಾಜು

Last Updated 1 ಏಪ್ರಿಲ್ 2020, 11:51 IST
ಅಕ್ಷರ ಗಾತ್ರ

ಮೇಲುಕೋಟೆ: ‘ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬಂದ ನಂತರ ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಕಿರೀಟಧಾರಣಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು’ ಎಂದು ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಇಲ್ಲಿ ಮಾತನಾಡಿದ ಅವರು, ಕೊರೊನಾ ಹಬ್ಬುವುದನ್ನು ತಡೆಗಟ್ಟಲು ಸರ್ಕಾರ ಮತ್ತು ಜಿಲ್ಲಾಡಳಿತದ ತೀರ್ಮಾನದಂತೆ ವೈರಮುಡಿ ಜಾತ್ರಾ ಮಹೋತ್ಸವವನ್ನು ಮುಂದೂಡಲಾಗಿದೆ. ಇದರಿಂದ ಲಕ್ಷಾಂತರ ಭಕ್ತರು ನಿರಾಶರಾಗಿದ್ದರು. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಧಾರ್ಮಿಕ ನಿಯಮಾವಳಿಗಳ ಅನುಸಾರ ದಿನ ನಿಗದಿ ಮಾಡಿ, ಎಲ್ಲಾ ಪೂಜಾ ವಿಧಿವಿಧಾನಗಳನ್ನು ಅನುಸರಿಸಿ ಜಾತ್ರೆ ಹಾಗೂ ವೈರಮುಡಿ ಕಿರೀಟಧಾರಾ ಮಹೋತ್ಸವವನ್ನು ವೈಭವದಿಂದ ಆಚರಿಸಲಾಗುವುದು’ ಎಂದರು.

‘ದೇವಾಲಯದಲ್ಲಿ ಶ್ರೀಚೆಲುವನಾರಾಯಣಸ್ವಾಮಿ ಮತ್ತು ಯೋಗಾನರಸಿಂಹಸ್ವಾಮಿಗೆ ನಿತ್ಯಪೂಜಾ ಕೈಂಕರ್ಯ ನೆರವೇರುತ್ತಿದೆ. ರೋಗ ನಿಯಂತ್ರಣಕ್ಕೆ ಸರ್ಕಾರಗಳು, ಜಿಲ್ಲಾಡಳಿತ ಕೈಗೊಂಡ ಕ್ರಮಗಳು ಯಶಸ್ವಿಯಾಗಿ, ಆರೋಗ್ಯಧಾಯಕ ವಾತಾವರಣ ನಿರ್ಮಾಣವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT