ಮಂಡ್ಯ: ‘ವಾಲ್ಮೀಕಿ ಎಂದಾಕ್ಷಣ ನಮಗೆಲ್ಲ ನೆನಪಾಗುವುದೇ ರಾಮಾಯಣ ಮಹಾಕಾವ್ಯ. ವಾಲ್ಮೀಕಿಯವರು ಗುರುಕುಲಕ್ಕೆ ಹೋಗಿ ಗುರುಗಳಿಂದ ಪಾಠ ಕಲಿತವರಲ್ಲ. ಏಕೆಂದರೆ ಹಿಂದಿನ ಕಾಲದಲ್ಲಿ ಶೂದ್ರರಿಗೆ ಯಾವುದೇ ವೈದಿಕರು ವಿದ್ಯೆ ನೀಡುತ್ತಿರಲಿಲ್ಲ. ಶೂದ್ರರಾಗಿ ಹುಟ್ಟಿದ ವಾಲ್ಮೀಕಿ ಅವರು ಯಾವುದೇ ಗುರುವಿನ ಸಹಾಯ ಪಡೆಯದೆ ರಾಮಾಯಣವೆಂಬ ಮಹಾಗ್ರಂಥವನ್ನು ರಚಿಸಿದ್ದಾರೆ’ ಎಂದು ಶಾಸಕ ಪಿ. ರವಿಕುಮಾರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿಯವರು ಸಂಸ್ಕೃತ ಭಾಷೆಯಲ್ಲಿ ಬರೆದ ರಾಮಾಯಣವನ್ನು ಹೊಸ ಕನ್ನಡಕ್ಕೆ ಹಲವಾರು ಕವಿಗಳು ಭಾಷಾಂತರ ಮಾಡಿದ್ದಾರೆ. ನಮ್ಮ ಸರ್ಕಾರವು ಕೂಡ ವಾಲ್ಮೀಕಿ ಜನಾಂಗದ ಏಳಿಗೆಗೆ ಅನುದಾನ ನೀಡಿದೆ. ವಾಲ್ಮೀಕಿ ಅವರ ಚಿಂತನೆ, ಆದರ್ಶ ಇಂದಿಗೂ ಪ್ರಸ್ತುತ ಎಂದರು.

ಜಿಲ್ಲಾಧಿಕಾರಿ ಕುಮಾರ ಮಾತನಾಡಿ, ‘ರಾಮಾಯಣ ಮಹಾಕಾವ್ಯವು ಸುಮಾರು 24,000 ಶ್ಲೋಕಗಳನ್ನು ಒಳಗೊಂಡಿದ್ದು, ದೇಶದ ಎಲ್ಲಾ ಭಾಷೆಗಳಲ್ಲೂ ಲಭ್ಯವಿದೆ. ಕುವೆಂಪು ಹಾಗೂ ಪಂಪ ಕವಿಗಳು ಸೇರಿದಂತೆ ಇನ್ನಿತರೆ ಕವಿಗಳು ರಾಮಾಯಣವನ್ನು ಬರೆಯಲು ವಾಲ್ಮೀಕಿಯ ಸಂಸ್ಕೃತ ಭಾಷೆಯ ರಾಮಾಯಣ ಮೂಲಾಧಾರವಾಗಿದೆ’ ಎಂದರು.

ರಾಮಾಯಣದಲ್ಲಿ ನೈತಿಕ ಮೌಲ್ಯಗಳು ಅಡಗಿವೆ. ಸ್ತ್ರೀಗೆ ಆದ್ಯತೆ ನೀಡಿದ ಮೊಟ್ಟ ಮೊದಲ ವ್ಯಕ್ತಿ ವಾಲ್ಮೀಕಿ ಮಹರ್ಷಿ. ರಾಮಾಯಣದಲ್ಲಿ ಸೀತೆಯನ್ನು ಅತ್ಯುನ್ನತ ಮಟ್ಟದಲ್ಲಿ ಚಿತ್ರಿಸಿದ್ದಾರೆ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಸಹಾಯಕ ಪ್ರಾಧ್ಯಾಪಕ ಎಚ್.ಪಿ. ಧರ್ಮೇಶ್ ಮಾತನಾಡಿದರು.

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಾಲ್ಮೀಕಿ ಜನಾಂಗದ ಸಾಧಕರನ್ನು ಸನ್ಮಾನಿಸಲಾಯಿತು. ಕಳೆದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕವನ್ನು ಪಡೆದ ವಾಲ್ಮೀಕಿ ಜನಾಂಗದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ನಹೀಂ, ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್, ಉಪಾಧ್ಯಕ್ಷ ಅರುಣ್ ಕುಮಾರ್, ಸದಸ್ಯರಾದ ಶ್ರೀಧರ್, ಶಿವಲಿಂಗು, ಪ್ರಕಾಶ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್. ನಾಗರಾಜು, ಉಪ ವಿಭಾಗಾಧಿಕಾರಿ ಶಿವಮೂರ್ತಿ, ನಗರಸಭೆ ಪೌರಾಯುಕ್ತ ಎಂ.ಪಿ. ಕೃಷ್ಣಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್ ಪಾಲ್ಗೊಂಡಿದ್ದರು.

ವಾಲ್ಮೀಕಿ ಜಯಂತಿ ಮೆರವಣಿಗೆ

ವಾಲ್ಮೀಕಿ ಜಯಂತಿ ಅಂಗವಾಗಿ ಅವರ ಭಾವಚಿತ್ರವನ್ನೊಳಗೊಂಡ ಮೆರವಣಿಗೆಗೆ ಮಂಡ್ಯ ನಗರದ ಜ್ಯುಬಿಲಿ ಪಾರ್ಕ್ ಬಳಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಎಲ್. ನಾಗರಾಜು ಚಾಲನೆ ನೀಡಿದರು. ಡೊಳ್ಳುಕುಣಿತ ತಮಟೆ ನಗಾರಿ ಪೂಜಾ ಕುಣಿತ ಮೆರವಣಿಗೆ ಸೇರಿದಂತೆ ವಿವಿಧ ಕಲಾ ತಂಡಗಳು ಹಾಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು ಮೆರವಣಿಗೆಗೆ ವಿಶೇಷ ಮೆರುಗು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.