ಶುಕ್ರವಾರ, ಜುಲೈ 30, 2021
26 °C

ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 107 ಅಡಿ ದಾಟಿದೆ. ನೀರಿನ ಮಟ್ಟ ಹೆಚ್ಚಾಗುತ್ತಿದ್ದಂತೆ ತಮಿಳುನಾಡಿಗೂ ನೀರು ಹರಿಸಲಾಗುತ್ತಿದೆ.

ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ತಮಿಳುನಾಡಿಗೆ ಜುಲೈ ತಿಂಗಳಲ್ಲಿ 31.3 ಟಿಎಂಸಿ ಅಡಿ ನೀರು ಹರಿಸಬೇಕು. ಅದರಂತೆ ನಿತ್ಯ 3,500 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

‘ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರೂಪಿಸಿರುವ ಅಂತರರಾಜ್ಯ ವ್ಯಾಜ್ಯಗಳ ಸೆಲ್‌ ಅಧಿಕಾರಿಗಳ ಸೂಚನೆಯಂತೆ ನೀರು ಹರಿಸಲಾಗುತ್ತಿದೆ’ ಎಂದು ನಿಗಮದ ಅಧೀಕ್ಷಕ ಎಂಜಿನಿಯರ್‌ ವಿಜಯ್‌ಕುಮಾರ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು