ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಮಿತ ಬಳಕೆಗೆ ಮಾಡಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Published 25 ಫೆಬ್ರುವರಿ 2024, 13:37 IST
Last Updated 25 ಫೆಬ್ರುವರಿ 2024, 13:37 IST
ಅಕ್ಷರ ಗಾತ್ರ

ಮಳವಳ್ಳಿ: ಬರಗಾಲ ಎದುರಾಗಿರುವುರಿಂದ  ಮಳೆಯಾಗುವವರೆಗೆ ನೀರನ್ನು ಮಿತವಾಗಿ ಬಳಸಬೇಕು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ತಾಲ್ಲೂಕಿನ ರಾವಣಿ ಗ್ರಾಮದಲ್ಲಿ ₹95 ಲಕ್ಷ  ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ  ಅವರು ಮಾತನಾಡಿದರು. ಕೃಷ್ಣರಾಜ ಸಾಗರ ಜಲಾಶಯದಲ್ಲಿ ಈಗಾಗಲೇ ನೀರು ಕಡಿಮೆಯಾಗಿರುವುದರಿಂದ  ನೀರನ್ನು ಮಿತವಾಗಿ ಬಳಕೆ ಮಾಡಬೇಕು. ಬರಗಾಲವನ್ನು ಸಮರ್ಪಕವಾಗಿ ಎದುರಿಸಲು ಆಡಳಿತಕ್ಕೆ ಹಲವು ಸೂಚನೆ ನೀಡಲಾಗಿದೆ. ಜನರು ಸಹಕಾರ ನೀಡಿದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು.

ನರೇಗಾ ಯೋಜನೆಯಡಿ ಗ್ರಾಮಗಳ ರಸ್ತೆ ಮತ್ತು ಚರಂಡಿಗಳನ್ನು ನಿರ್ಮಿಸಲು ಅವಕಾಶವಿದೆ. ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದು, ನರೇಗಾ ಮೂಲಕ  ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜೆ.ದೇವರಾಜು, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಮುಖಂಡರಾದ ಆರ್.ಎನ್.ವಿಶ್ವಾಸ್, ಮುಟ್ಟನಹಳ್ಳಿ ಅಂಬರೀಷ್, ವಕೀಲ ಜಗದೀಶ್, ಬಂಕ್ ಮಹದೇವು, ಎನ್.ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಲ್ಲಿಕ್, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಸೋಮಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT