ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‌89.81 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

Published 5 ಮಾರ್ಚ್ 2024, 5:07 IST
Last Updated 5 ಮಾರ್ಚ್ 2024, 5:07 IST
ಅಕ್ಷರ ಗಾತ್ರ

ಮಂಡ್ಯ; ಬರಗಾಲದಿಂದಾಗಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಸೋಮವಾರ 89.81 ಅಡಿಗೆ ಇಳಿದಿದೆ.

ಕಳೆದ ವರ್ಷ ಇದೇ ದಿನ 105.38 ಅಡಿ ಇತ್ತು. 2018ರಲ್ಲಿ 90 ಅಡಿಗೆ ಕುಸಿದಿತ್ತು. ನಂತರ ಇದೇ ಮೊದಲ ಬಾರಿಗೆ 90 ಅಡಿಗಿಂತ ಕೆಳಗಿಳಿದಿದೆ.

ಮುಂಗಾರು ಮಳೆ ಕೊರತೆಯಾಗಿದ್ದರಿಂದ ಕಳೆದ ವರ್ಷ ಭರ್ತಿಯಾಗಲಿಲ್ಲ. ಸದ್ಯ ಒಳಹರಿವು 226 ಕ್ಯುಸೆಕ್‌ ಇದೆ, ಕುಡಿಯುವ ನೀರು ಪೂರೈಕೆ ಸೇರಿದಂತೆ ಹೊರಹರಿವು 749 ಕ್ಯುಸೆಕ್‌ ಇದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ಕಳೆದ ಡಿಸೆಂಬರ್‌ವರೆಗೂ ತಮಿಳುನಾಡಿಗೆ ನೀರು ಹರಿಸಿದ್ದರಿಂದ ನೀರಿನ ಮಟ್ಟ ಕುಸಿದಿದೆ. ಬೆಳೆದು ನಿಂತಿರುವ ಕಬ್ಬಿನ ಬೆಳೆ ಉಳಿಸಿಕೊಳ್ಳಲು ರೈತರು ಪರದಾಡುತ್ತಿದ್ದು, ನೀರು ಹರಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಉಳಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

‘ಜಲಾಶಯದಲ್ಲಿ ಕೇವಲ 15.825 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ, 5 ಟಿಎಂಸಿ ಅಡಿ ಡೆಡ್‌ ಸ್ಟೋರೇಜ್‌ ಹೊರತುಪಡಿಸಿದರೆ 10.825 ಟಿಎಂಸಿ ಅಡಿ ಮಾತ್ರ ಉಳಿಯಲಿದೆ. ಅದನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಕಾಪಾಡಿಕೊಳ್ಳುವುದು ಅನಿವಾರ್ಯ’ ಎಂದು ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT