ಮಂಡ್ಯ: ‘ಪಂಚ ಗ್ಯಾರಂಟಿ ಯೋಜನೆಗಳಿಗೆ ಕಳೆದ ವರ್ಷ ₹53 ಸಾವಿರ ಕೋಟಿ ವೆಚ್ಚ ಮಾಡಿದ್ದೆವು. ಈ ಬಾರಿ ಬಜೆಟ್ನಲ್ಲಿ ₹50 ಸಾವಿರ ಕೋಟಿ ಮೀಸಲಿಟ್ಟಿದ್ದೇವೆ. ಆಸ್ತಿ ಸೃಜನೆಗೆ ₹83 ಸಾವಿರ ಕೋಟಿ ಇಟ್ಟಿದ್ದೇವೆ. ನಮ್ಮ ಸರ್ಕಾರ ₹1.35 ಲಕ್ಷ ಕೋಟಿಯನ್ನು ಅಭಿವೃದ್ಧಿಗೆ ತೆಗೆದಿರಿಸಿದೆ. ಬಿಜೆಪಿಯವರು ಆರೋಪಿಸುವಂತೆ ‘ಪಾಪರ್ ಸರ್ಕಾರ’ವಾಗಿದ್ದರೆ, ಖಜಾನೆ ಖಾಲಿಯಾಗಿದ್ದರೆ ಇಷ್ಟೊಂದು ಅಭಿವೃದ್ಧಿ ಸಾಧ್ಯವಿತ್ತೆ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.

ನಗರದ ಕನಕ ಭವನದಲ್ಲಿ ಮಂಡ್ಯ ಜಿಲ್ಲಾ ಕುರುಬರ ಸಂಘದ ವತಿಯಿಂದ ಆಯೋಜಿಸಿದ್ದ ಬಾಲಕರ ವಿದ್ಯಾರ್ಥಿನಿಲಯದ ನೂತನ ಕಟ್ಟಡದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಿಜೆಪಿ ನಿರಂತರವಾಗಿ ಸುಳ್ಳು ಹೇಳಿಕೊಂಡು ತಿರುಗುತ್ತಿದೆ. ಸರ್ಕಾರದ ಬೊಕ್ಕಸ ಖಾಲಿ ಎನ್ನುತ್ತಿದ್ದಾರೆ. ನಮ್ಮ ಸರ್ಕಾರದ ಅಭಿವೃದ್ಧಿಪರ ಕಾರ್ಯಕ್ರಮಗಳು ಜನರಿಗೆ ಕಾಣುತ್ತಿವೆ, ಬಿಜೆಪಿಯವರಿಗೆ ಕಾಣುತ್ತಿಲ್ಲ. ಬಿಜೆಪಿಯವರು ಯಾವತ್ತಿಗೂ ಸಾಮಾಜಿಕ ನ್ಯಾಯದ ಪರವಾಗಿ ಇಲ್ಲ’ ಎಂದು ಕುಟುಕಿದರು.

‘ನನ್ನ ಹೆಂಡ್ತಿಗೂ ಫ್ರೀ’

ನಮ್ಮ ಸರ್ಕಾರ ಜಾತಿ ನೋಡಿ ಗ್ಯಾರಂಟಿ ಸೌಲಭ್ಯಗಳನ್ನು ಕೊಡುತ್ತಿಲ್ಲ. ಸರ್ವ ಜನಾಂಗದವರಿಗೂ ಪಂಚ ಗ್ಯಾರಂಟಿ ಸೌಲಭ್ಯ ತಲುಪುತ್ತಿದೆ. ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಹಾಗೂ ನನ್ನ ಹೆಂಡ್ತಿಯೂ ಶಕ್ತಿ ಯೋಜನೆಯಡಿ ಉಚಿತವಾಗಿ ಬಸ್ನಲ್ಲಿ ಹೋಗಬಹುದು ಎಂದು ಸಿಎಂ ಹೇಳಿದಾಗ, ಸಭಿಕರು ಶಿಳ್ಳೆ, ಚಪ್ಪಾಳೆ ತಟ್ಟಿ ಹರ್ಷೋದ್ಗಾರ ಮಾಡಿದರು.

ರಾಜ್ಯದಲ್ಲಿರುವ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಮೈಸೂರಿನಲ್ಲಿ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ. ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ನನಗೆ ಇಲ್ಲ’ ಎಂದರು.

2028ರವರೆಗೂ ಸಿದ್ದು ಸಿಎಂ: ಭೈರತಿ ಸುರೇಶ್

ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾತನಾಡಿ, ‘2028ರವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿರುತ್ತಾರೆ. ಎಐಸಿಸಿ ಆಶೀರ್ವಾದ ಮತ್ತು ಜನರ ಬೆಂಬಲ ಇರುವವರೆಗೂ ಸಿಎಂ ಆಗಿ ಮುಂದುವರಿಯುತ್ತಾರೆ. ಸಿದ್ದರಾಮಯ್ಯ ಅಂದ್ರೆ ಕಾಂಗ್ರೆಸ್. ಕಾಂಗ್ರೆಸ್ ಅಂದ್ರೆ ಸಿದ್ದರಾಮಯ್ಯ. ಅವರ ನೇತೃತ್ವದಿಂದಲೇ ಕಾಂಗ್ರೆಸ್ 136 ಸ್ಥಾನಗಳನ್ನು ಗೆದ್ದಿದೆ’ ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ಪಿ.ರವಿಕುಮಾರ್ ಗಣಿಗ, ದಿನೇಶ್ ಗೂಳಿಗೌಡ, ಮಧು ಮಾದೇಗೌಡ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಮುಂತಾದವರು ಪಾಲ್ಗೊಂಡಿದ್ದರು.

ಅಮ್ಯೂಸ್ಮೆಂಟ್, ಕಾವೇರಿ ಆರತಿಗೆ ರೈತರ ವಿರೋಧ

ಕೆಆರ್ಎಸ್ ಅಣೆಕಟ್ಟೆಗೆ ಧಕ್ಕೆ ತರುವ ₹2400 ಕೋಟಿ ವೆಚ್ಚದ ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಕಾವೇರಿ ಆರತಿ ಕಾರ್ಯಕ್ರಮಗಳನ್ನು ಕೂಡಲೇ ಕೈಬಿಡಬೇಕು. ಡ್ಯಾಂ ಸುತ್ತಮುತ್ತ ಜನಸಂಪರ್ಕ ಯೋಜನೆ ಕೈಗೊಳ್ಳಬಾರದು ಎಂದು ರೈತಸಂಘ ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

‘ಕೆಆರ್ಎಸ್ ಅಣೆಕಟ್ಟು ಭದ್ರತೆಗೆ ಭದ್ರತಾ ಸಿಬ್ಬಂದಿ, ಮಿಲಿಟರಿ ಭದ್ರತೆ ಒದಗಿಸಬೇಕು. ಮೌಢ್ಯದ ಹೆಸರಿನಲ್ಲಿ ₹92 ಕೋಟಿ ಖರ್ಚು ಮಾಡಿ ‘ಕಾವೇರಿ ಆರತಿ’ ಮಾಡುವ ಅಗತ್ಯವೇನಿದೆ’ ಎಂದು ರೈತ ನಾಯಕಿ ಸುನಂದಾ ಜಯರಾಂ ಪ್ರಶ್ನಿಸಿದರು.

ಸಿಎಂ ಪ್ರತಿಕ್ರಿಯಿಸಿ, ‘ಕೆಆರ್ಎಸ್ ಅಣೆಕಟ್ಟೆ ಪ್ರವಾಸಿ ತಾಣವೂ ಆಗಿದೆ. ಪ್ರವಾಸೋದ್ಯಮ ಉತ್ತೇಜನಕ್ಕೆ ಈ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ನಿಮ್ಮ ಮನವಿಯನ್ನು ಮತ್ತೊಮ್ಮೆ ಪರಿಶೀಲಿಸುತ್ತೇನೆ’ ಎಂದರು.

ಕಪ್ಪು ಬಾವುಟ: ದಸಂಸ ಕಾರ್ಯಕರ್ತರ ವಶ

ಶೇ 75ರಷ್ಟು ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದ ಸಿದ್ದರಾಮಯ್ಯ ಅವರು ನುಡಿದಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿ, ಮುಖ್ಯಮಂತ್ರಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ದಲಿತ ಸಂಘರ್ಷ ಸಮಿತಿ ಮುಖಂಡರು ಮತ್ತು ಕಾರ್ಯಕರ್ತರು ಸಜ್ಜಾಗಿದ್ದರು.

ಈ ಮಾಹಿತಿ ಪಡೆದ ಪೊಲೀಸರು, ಮುಖ್ಯಮಂತ್ರಿ ಅವರು ಮಂಡ್ಯ ನಗರ ಪ್ರವೇಶಿಸುವ ಮುನ್ನವೇ ದಸಂಸ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಪೊಲೀಸ್ ವಾಹನದಲ್ಲಿ ಕರೆದೊಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.