ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಮಂಡ್ಯದಿಂದಲೇ ಸ್ಪರ್ಧೆ: ಸಂಸದೆ ಸುಮಲತಾ

Published 23 ಡಿಸೆಂಬರ್ 2023, 11:57 IST
Last Updated 23 ಡಿಸೆಂಬರ್ 2023, 11:57 IST
ಅಕ್ಷರ ಗಾತ್ರ

ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಖಚಿತ. ಈ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಹೇಳಿದರು.

ಮದ್ದೂರಿನಲ್ಲಿ ಶನಿವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಅವರು ‘ ಈ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. ಮುಂದೆ ಎಲ್ಲ ವಿಷಯವನ್ನೂ ತಿಳಿಸುತ್ತೇನೆ’ ಎಂದಷ್ಟೇ ಹೇಳಿದರು. ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿ ‘ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದೂ ಇಲ್ಲ’ ಎಂದರು.

‘ ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್‌ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT