ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರ ಬಿಜೆಪಿಗೆ ಸೇರ್ಪಡೆ; ಸಂಸದೆ ಸುಮಲತಾ

Published 3 ಏಪ್ರಿಲ್ 2024, 8:25 IST
Last Updated 3 ಏಪ್ರಿಲ್ 2024, 8:25 IST
ಅಕ್ಷರ ಗಾತ್ರ

ಮಂಡ್ಯ: 'ಪಕ್ಷೇತರವಾಗಿ ಸ್ಪರ್ಧಿಸುವ ಹಟ ಇಲ್ಲ, ಗೌರವ ಇಲ್ಲದ ಕಾಂಗ್ರೆಸ್ ಪಕ್ಷ ಸೇರಲ್ಲ. ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿರುವ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ' ಎಂದು ಸಂಸದೆ ಸುಮಲತಾ ಬುಧವಾರ ಘೋಷಿಸಿದರು.

ಕಾಳಿಕಾಂಬಾ ಸಮುದಾಯ ಭವನದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು 'ಅಭಿವೃದ್ಧಿಯೇ ಮೂಲಮಂತ್ರ ಎಂದು ದೇಶವನ್ನು ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ ನನಗೆ ಸ್ಫೂರ್ತಿ. ಟಿಕೆಟ್ ಸಿಗದಿದ್ದರೆ ರಾಜಕಾರಣಿಗಳು‌ ಪಕ್ಷ ಬದಲಾಯಿಸುತ್ತಾರೆ. ಆದರೆ ನಾನು ಅಂತಹ ರಾಜಕಾರಣಿ ಅಲ್ಲ. ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತಿದ್ದೇನೆ' ಎಂದರು.

'ನಾನು ಅಂಬರೀಷ್ ಅವರ ಪತ್ನಿ, ಮಳವಳ್ಳಿ ಹುಚ್ಚೇಗೌಡರ ಸೊಸೆ. ಆ ಸ್ಥಾನವನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ನನಗೆ ಸ್ಥಾನ ಮುಖ್ಯವಲ್ಲ, ಮಂಡ್ಯ ಜಿಲ್ಲೆ ಜನರ ಪ್ರೀತಿಯೇ ಮುಖ್ಯ. ನನಗೆ ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ಮೈಸೂರು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡಲಾಗಿತ್ತು.‌ ಆದರೆ ನಾನು ಎಲ್ಲವನ್ನೂ ನಿರಾಕರಿಸಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT