ಬುಧವಾರ, ಆಗಸ್ಟ್ 10, 2022
24 °C

ಮಳವಳ್ಳಿ: ಸರಣಿ ಅಪಘಾತ ; ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಳವಳ್ಳಿ: ತಾಲ್ಲೂಕಿನ ದಾಸನದೊಡ್ಡಿ ಗ್ರಾಮದ ಬಳಿ ಎರಡು ಕಾರು ಮತ್ತು ಬೈಕ್ ನಡುವೆ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಚನ್ನಪಟ್ಟಣದ ನಿವಾಸಿ ಗಂಗಾ ಜೋಶಿ (40) ಮೃತ ಮಹಿಳೆ.

ಚನ್ನಪಟ್ಟಣದಿಂದ ಗಂಗಾ ಜೋಶಿ, ಮಧುಸೂದನ್ ಜೋಶಿ ಮತ್ತು ಅನುಷಾ ಶಿವನಸಮುದ್ರದ ಗಗನಚುಕ್ಕಿ ಜಲಪಾತ ವೀಕ್ಷಣೆಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಯಳಂದೂರು ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಇದೇ ವೇಳೆ ಹಿಂದೆ ಬರುತ್ತಿದ್ದ ಬೈಕ್ ಸಹ ಕಾರಿಗೆ ಡಿಕ್ಕಿ ಹೊಡೆದಿದೆ.

ಗಂಗಾ ಜೋಶಿ ಸ್ಥಳದಲ್ಲೇ ಮೃತಪಟ್ಟರೆ, ಮಧುಸೂದನ್ ಜೋಶಿ ಸ್ಥಿತಿ ಗಂಭೀರವಾಗಿದೆ. ಒಂಬತ್ತು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಕೆ.ಎಂ.ದೊಡ್ಡಿಯ ಖಾಸಗಿ ಆಸ್ಪತ್ರೆಗೆ ಹಾಗೂ ಕೆಲವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬರದಿದ್ದರಿಂದ ಪೊಲೀಸರು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಘಟನೆ ಸ್ಥಳಕ್ಕೆ ಬೆಳಕವಾಡಿ ಮತ್ತು ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು