ಮಂಗಳವಾರ, ಜನವರಿ 25, 2022
28 °C

ಮಂಡ್ಯ: ಓಂಶಕ್ತಿ ದೇವಾಲಯಕ್ಕೆ ತೆರಳಿದ್ದ 30 ಮಹಿಳೆಯರಿಗೆ ಕೋವಿಡ್ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

iStock Image- DH FILE

ಮಂಡ್ಯ: ತಮಿಳುನಾಡಿನ ಓಂಶಕ್ತಿ ದೇವಾಲಯಕ್ಕೆ ತೆರಳಿದ್ದ ಶ್ರೀರಂಗಪಟ್ಟಣ ತಾಲ್ಲೂಕಿನ 30 ಮಹಿಳೆಯರಲ್ಲಿ ಕೋವಿಡ್- 19 ಪತ್ತೆಯಾಗಿದೆ.

ವಿವಿಧ ಹಳ್ಳಿಗಳಿಂದ 100ಕ್ಕೂ ಹೆಚ್ಚು ಭಕ್ತರು 6 ಬಸ್‌ಗಳಲ್ಲಿ ಓಂಶಕ್ತಿ ದೇವಾಲಯಕ್ಕೆ ತೆರಳಿದ್ದರು. ಸೋಮವಾರ ವಾಪಸ್ ಬಂದ ಮಹಿಳೆಯರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಅವರಲ್ಲಿ 30 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಇನ್ನು 2 ಬಸ್ ವಾಪಸ್ ಬರಬೇಕಿದ್ದು ಮತ್ತಷ್ಟು ಜನರಲ್ಲಿ ಸೋಂಕು ಪತ್ತೆಯಾಗುವ ಸಾಧ್ಯತೆ ಇದೆ.

ಸೋಂಕಿತರನ್ನು ಶ್ರೀರಂಗಪಟ್ಟಣದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕೋವಿಡ್ ಕೇರ್ ಕೇಂದ್ರದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು