ಶ್ರೀರಂಗಪಟ್ಟಣ: ಪಟ್ಟಣದ ಪಶ್ಚಿಮವಾಹಿನಿ ಬಳಿ ಶನಿವಾರ ಮುಂಜಾನೆ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ADVERTISEMENT
ADVERTISEMENT
ತಾಲ್ಲೂಕಿನ ಅರಕೆರೆ ಗ್ರಾಮದ ಮಹದೇವು ಅವರ ಮಗ ಆಕಾಶ್ (24) ಮೃತರು.
ರೈಲು ಹರಿದ ರಭಸಕ್ಕೆ ರುಂಡ ಮತ್ತು ಮುಂಡ ಬೇರ್ಪಟ್ಟಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಕಾಶ್ ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮೈಸೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.