ಭಾನುವಾರ, ಆಗಸ್ಟ್ 14, 2022
20 °C

ಗ್ರಾಮ ಪಂಚಾಯಿತಿಯತ್ತ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಚಿತ್ತ

ಎಂ.ಆರ್. ಅಶೋಕ್ ಕುಮಾರ್ Updated:

ಅಕ್ಷರ ಗಾತ್ರ : | |

ಮದ್ದೂರು: ತಾಲ್ಲೂಕಿನ ಸೋಮನಹಳ್ಳಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ 2005ರಲ್ಲಿ ಸ್ಪರ್ಧಿಸಿ ಸದಸ್ಯರಾಗಿದ್ದ ಮಾಜಿ ಸದಸ್ಯೆಯೊಬ್ಬರು ಈ ಬಾರಿ ಗ್ರಾಮ ಪಂಚಾಯಿತಿ ಪ್ರವೇಶಿಸಲು ಮುಂದಾಗಿದ್ದಾರೆ.

ಜಿ.ಪಂ ಮಾಜಿ ಸದಸ್ಯೆ ಭಾಗ್ಯಮ್ಮ ಅವರು ತಾಲ್ಲೂಕಿನ ಕೆ.ಹೊನ್ನಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಹೊಸೂರು ಗ್ರಾಮದ ಸದಸ್ಯ ಸ್ಥಾನಕ್ಕೆ ಆಯ್ಕೆ ಬಯಸಿದ್ದಾರೆ. ದಡಗ ಹೊಸೂರು ಕ್ಷೇತ್ರವು ಎಸ್.ಸಿ (ಮಹಿಳೆ) ಮೀಸಲು ಕ್ಷೇತ್ರವಾಗಿದ್ದು, ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಅವರ ಪತಿ ಮದ್ದೂರು ತಾಲ್ಲೂಕಿನ ಅಕ್ಷರ ದಾಸೋಹದ ನಿರ್ದೇಶಕರಾಗಿ ಸೇವೆ ಸಲ್ಲಿಸಿ 2 ವರ್ಷಗಳ ಹಿಂದೆ ನಿವೃತ್ತರಾಗಿದ್ದಾರೆ. ಗ್ರಾಮದಲ್ಲಿ ಪತಿ, ಪತ್ನಿ ಸೇರಿಕೊಂಡು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

‘ಈ ಹಿಂದೆ 2005ರಲ್ಲಿ ಜಿ.ಪಂ ಸದಸ್ಯೆಯಾಗಿ ಆಯ್ಕೆಯಾಗಿ ಉತ್ತಮ ಸೇವೆ ಸಲ್ಲಿಸಿದ್ದೇನೆ. ಅಂದು ಮಾಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿರುವ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲೂ ಒತ್ತಾಯಿಸಿದರು. ಅವರ ಆಶಯದಂತೆ ಕಣಕ್ಕೆ ಇಳಿದಿದ್ದೇನೆ’ ಎಂದು ಭಾಗ್ಯಮ್ಮ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು