ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾ ಚಟುವಟಿಕೆಗೆ ಸರ್ಕಾರದ ಪ್ರೋತ್ಸಾಹ

ಪ್ರೊ ಕಬಡ್ಡಿ ಲೀಗ್‌ ಬಿಜಿಎಸ್‌ ಟೂರ್ನಿ ಸಮಾರೋಪ ಸಮಾರಂಭದಲ್ಲಿ ಸಚಿವ ಪ್ರಮೋದ್‌ ಮಧ್ವರಾಜ್‌ ಅಭಿಮತ
Last Updated 22 ಮೇ 2017, 7:07 IST
ಅಕ್ಷರ ಗಾತ್ರ

ಮಂಡ್ಯ: ‘ರಾಜ್ಯ ಸರ್ಕಾರ ಜಿಲ್ಲಾ ಮಟ್ಟ ದಲ್ಲಿ ನಡೆಯುವ ಎಲ್ಲಾ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡು ತ್ತಿದೆ’ ಎಂದು ಮೀನುಗಾರಿಕೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಮಂಡ್ಯ ಕಬಡ್ಡಿ ಸ್ಪೋರ್ಟ್ಸ್ ಕ್ಲಬ್‌ ವತಿಯಿಂದ ಭಾನುವಾರ ನಡೆದ ಪ್ರೊ ಕಬಡ್ಡಿ ಲೀಗ್‌ ಬಿಜಿಎಸ್‌ – 2107 ಟೂರ್ನಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನರಿಗೆ ಸ್ಫೂರ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರೀಡಾ ಇಲಾಖೆಗೆ ನೀಡುವ ಅನುದಾನವನ್ನು ₹ 142 ಕೋಟಿಗಳಿಂದ ₹ 285 ಕೋಟಿಗಳಿಗೆ ಹೆಚ್ಚಿಸಿದೆ. ನಗರದಲ್ಲಿ ಉತ್ತಮವಾಗಿ ಕಬಡ್ಡಿ ಟೂರ್ನಿ ಆಯೋಜಿಸಿದ ಮಂಡ್ಯ ಕಬಡ್ಡಿ ಸ್ಪೋರ್ಟ್‌್ಸ ಕ್ಲಬ್‌ಗೆ ಇಲಾಖೆಯ ವತಿಯಿಂದ ₹ 3 ಲಕ್ಷ ಹಣ ನೀಡಲಾಗುವುದು’ ಎಂದು ಹೇಳಿದರು.

ನಾಗಮಂಗಲ ಶಾಸಕ ಎನ್‌. ಚಲುವರಾಯಸ್ವಾಮಿ ಮಾತನಾಡಿ ‘ನಗರದಲ್ಲಿ ಕಬಡ್ಡಿ ಟೂರ್ನಿ ಆಯೋಜಿ ಸಿರುವುದು ಹೆಮ್ಮೆಯ ವಿಷಯ. ಸ್ಪರ್ಧೆಯಲ್ಲಿ ಗೆಲ್ಲುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯ. ಹೀಗಾಗಿ ಯುವಕರು ಇಂತಹ ಚಟುವಟಿಕೆಯಲ್ಲಿ ಭಾಗವಹಿಸಿ ಕ್ರೀಡಾ ಚೈತನ್ಯ ಮೆರೆಯಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಕ್ಷೇತ್ರದ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶಾಸಕ ಪುಟ್ಟಣ್ಣಯ್ಯ, ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇ ಗೌಡ ಇತರರು ಉಪಸ್ಥಿತರಿದ್ದರು.

ಭಾನುವಾರ ರಾತ್ರಿ ನಡೆದ ಅಂತಿಮ ಪಂದ್ಯದಲ್ಲಿ ಮದ್ದೂರು ತಂಡದ ವಿರುದ್ಧ ನಾಗಮಂಗಲ ತಂಡ ಜಯಗಳಿಸಿತು. ಶಾಸಕ ಎನ್.ಚಲುವರಾಯಸ್ವಾಮಿ ಅವರು ವಿಜೇತ ತಂಡಕ್ಕೆ ಟ್ರೋಪಿ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT