ನಾಗಮಂಗಲ: ತಾಲ್ಲೂಕಿನಾದ್ಯಂತ ಬರ ಪರಿಹಾರ ಕಾಮಗಾರಿ ನಡೆಯುತ್ತಿದೆ. ಆದರೆ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಎರಡು ದಿನಕ್ಕೊಮ್ಮೆ ನೀರು ಬಿಡುವ ವ್ಯವಸ್ಥೆ ಜನರ ಆಕ್ರೊಶಕ್ಕೆ ಕಾರಣವಾಗಿದ್ದು, ಈಗ ಸರಬರಾಜಾಗುತ್ತಿರುವ ನೀರು ಕೂಡ ಕಲುಷಿತಗೊಂಡಿದೆ ಎಂಬ ಆರೋಪ ಅಲ್ಲಲ್ಲಿ ಕೇಳಿಬಂದಿದೆ.

ಪಟ್ಟಣಕ್ಕೆ ಕುಡಿಯುವ ನೀರು ಸೂಳೆಕೆರೆಯಿಂದ ಪೂರೈಕೆಯಾಗುತ್ತದೆ. ಆದರೆ, ಕೆರೆಯಲ್ಲಿ ನೀರು ಕ್ರಮೇಣ ಕಡಿಮೆಯಾಗುತ್ತಿದೆ. ನಿಗದಿತ ಸಮಯಕ್ಕೆ ಮಳೆ ಬಂದಿಲ್ಲ. ಇತ್ತ ಹೇಮಾವತಿ ನಾಲೆಗಳಿಂದಲೂ ಕೆರೆಗೆ ನೀರು ಪೂರೈಕೆಯಾಗುತ್ತಿಲ್ಲ. ನೀರಿಲ್ಲದೇ ಇದ್ದರಿಂದ ಕೆರೆಯಲ್ಲಿದ್ದ ಮೀನುಗಳು ಜೀವ ಕಳೆದುಕೊಳ್ಳುತ್ತಿವೆ.

ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲವೇ ದಿನಗಳಲ್ಲಿ ಸೂಳೆಕೆರೆ ಸಂಪೂರ್ಣ ಬರಿದಾಗುವುದ ರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೂ ಮುನ್ನ ಕ್ರಮ ತೆಗೆದುಕೊಳ್ಳಬೇಕು ಹಾಗು ಶುದ್ಧವಾದ ಕುಡಿಯುವ ನೀರು ಪೂರೈಕೆಯಾಗಬೇಕು ಎಂಬುದು ಪಟ್ಟಣದ ಜನತೆ ಆಗ್ರಹ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.