ಕಳಸ: ಸಮೀಪದ ಕಲ್ಲಾನೆ ಬಳಿ ಶುಕ್ರವಾರ ಬಸ್ ಅಪಘಾತದಲ್ಲಿ 35ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಡ್ಯ ಜಿಲ್ಲೆ ಮದ್ದೂರಿನ ಎಚ್‌ಕೆವಿ ಕಾಲೇಜಿನ 50 ವಿದ್ಯಾರ್ಥಿಗಳು ಹೊರನಾಡಿಗೆ ಪ್ರವಾಸಕ್ಕೆ ಬಂದಿದ್ದು, ಅನ್ನಪೂಣೇಶ್ವರಿ ದೇವಿ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಕಳಸ ಸಮೀಪದ ಕಲ್ಲಾನೆ ಬಳಿ ಬಸ್ ರಸ್ತೆ ಪಕ್ಕದ ಕಾಫಿ ತೋಟಕ್ಕೆ ಉರುಳಿ ಬಿದ್ದಿತು. ಪಲ್ಟಿ ಹೊಡೆದ ಬಸ್ 40 ಅಡಿ ಆಳಕ್ಕೆ ಬಿದ್ದಿದೆ. ಎರಡು ಮರಗಳು ಅಡ್ಡಬಂದಿದ್ದರಿಂದ ಹೆಚ್ಚಿನ ಅಪಾಯವಾಗಿಲ್ಲ.

ಗಾಯಾಳು ವಿದ್ಯಾರ್ಥಿಗಳನ್ನು ಆ್ಯಂಬುಲೆನ್ಸ್‌ನಲ್ಲಿ ಕಳಸದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಒಬ್ಬ ವಿದ್ಯಾರ್ಥಿಯ ಭುಜದ ಮೂಳೆ ಮುರಿದಿದೆ. ಉಳಿದ ವಿದ್ಯಾರ್ಥಿಗಳಿಗೆ ಸಣ್ಣ ಗಾಯಗಳಾಗಿದ್ದು ಸಂಜೆವರೆಗೂ ಆಸ್ಪತ್ರೆಯಲ್ಲೇ ಇದ್ದರು. ನಂತರ ಮದ್ದೂರಿಗೆ ವಾಪಸಾದರು.ಬಸ್ ಚಾಲಕನಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.ಬಸ್ ವೇಗವಾಗಿ ಸಾಗುತ್ತಿದ್ದು, ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತು ಎಂದು ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.