ಪಾಂಡವಪುರ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ತಹಶೀಲ್ದಾರ್ ಶಿವಕುಮಾರಸ್ವಾಮಿ ಹೇಳಿದರು.

ಪಟ್ಟಣದ ತ್ಯಾಗರಾಜ ಕಾಲೊನಿಯಲ್ಲಿ ಮಂಗಳವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮಗಳ ಪ್ರಗತಿಗೆ ಗ್ರಾಮಾಭಿವೃದ್ಧಿ ಘಟಕಗಳು ಪೂರಕವಾಗಲಿವೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎ.ಎಲ್. ಕೆಂಪೂಗೌಡ ಮಾತನಾಡಿ, ಮಧ್ಯವರ್ತಿಗಳ ಹಾವಳಿಯಿಂದಾಗಿ ಸರ್ಕಾರದ ಸವಲತ್ತು ಗ್ರಾಮೀಣ ಜನತೆಗೆ ತಲುಪುತ್ತಿಲ್ಲ. ಈ ನಿಟ್ಟಿನಲ್ಲಿ ಸಂಸ್ಥೆ ಕಾರ್ಯೋನ್ಮುಖವಾಗಲಿ ಎಂದರು.

ಸಂಸ್ಥೆಯ ಪ್ರಾದೇಶಿಕ ನಿರ್ದೇಶಕರಾದ ಎ. ಶ್ರೀಹರಿ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಎಂ. ರಾಮಕೃಷ್ಣ, ಇಒ ಸಿದ್ದಲಿಂಗಮೂರ್ತಿ, ಕಾರ್ಪೋರೇಷನ್ ಬ್ಯಾಂಕ್ ಶಾಖಾ ಪ್ರಬಂಧಕ ಎನ್. ರಾಜಣ್ಣ, ಪುಟ್ಟರಾಜೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.