ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದೃಢ ದೇಶ ನಿರ್ಮಾಣಕ್ಕೆ ಸಲಹೆ

Last Updated 6 ಫೆಬ್ರುವರಿ 2012, 7:45 IST
ಅಕ್ಷರ ಗಾತ್ರ

ಕೃಷ್ಣರಾಜಪೇಟೆ: ಸದೃಢ ದೇಶ ನಿರ್ಮಾಣ ಮಾಡುವ ಮಹತ್ಕಾರ್ಯಕ್ಕೆ ಯುವಜನರು ಮುಂದಾಗಬೇಕು ಎಂದು ಜಿ.ಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ವಿ.ಮಂಜೇಗೌಡ ಸಲಹೆ ನೀಡಿದರು.

ಪಟ್ಟಣದ ಬಾಲಕರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಯುವಜನ ಸೇವೆ ಮತ್ತು  ಕ್ರೀಡಾ ಇಲಾಖೆ, ಜಿಲ್ಲಾ ಯುವ ಪರಿಷತ್, ತಾಲ್ಲೂಕು ಆಡಳಿತ         ಮತ್ತು ತಾಲ್ಲೂಕು ಕರ್ನಾಟಕ ಜಾನಪದ ಪರಿಷತ್ ವತಿಯಿಂದ ಏರ್ಪಡಿಸಿರುವ ಎರಡು ದಿನಗಳ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಯಾವುದೇ ಆಮಿಷಗಳಿಗೆ ಒಳಗಾಗದೆ ಉತ್ತಮ ಶಿಕ್ಷಣ ಮತ್ತು ಉನ್ನತ ಸ್ಥಾನಮಾನ ಗಳನ್ನು ಗಳಿಸಿಕೊಳ್ಳುವತ್ತ ಗಮನ ಹರಿಸಬೇಕು. ಆ ಮೂಲಕ ತಮ್ಮ ಹೆತ್ತವರಿಗೆ, ಗುರು ಹಿರಿಯರಿಗೆ ಗೌರವ ತರಬೇಕು.

ದೇಶ ಪ್ರೇಮ, ಭ್ರಾತೃತ್ವ, ಪರೋಪಕಾರ, ಸಹಕಾರ ಭಾವನೆ ಗಳನ್ನು ಹೆಚ್ಚಾಗಿ ಮೈಗೂಡಿಸಿ ಕೊಂಡು ದೇಶದ ಅಮೂಲ್ಯ ಆಸ್ತಿಯಾಗಬೇಕು ಎಂದು ಅವರು ತಿಳಿಸಿದರು.

ಪುರಸಭೆ ಅಧ್ಯಕ್ಷ ಕೆ.ಎಚ್. ರಾಮಕೃಷ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಎಸ್.ಸಿ.ಅರವಿಂದ್, ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಡಾ.ಹುಲ್ಲಹಳ್ಳಿ ಮಂಜುಳಾ, ತಹಶೀಲ್ದಾರ್ ಡಾ.ಎಚ್.ಎಲ್. ನಾಗರಾಜ್, ಕ್ಷೇತ್ರಶಿಕ್ಷಣಾಧಿಕಾರಿ ಎ.ಬಿ.ಪುಟ್ಟಸ್ವಾಮಿಗೌಡ, ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಅಧ್ಯಕ್ಷ ಕೆ.ಎಸ್.ಸೋಮಶೇಖರ್, ಪುರಸಭೆ ಸದಸ್ಯ ಕೆ.ಆರ್.ನೀಲಕಂಠ, ತಾಲ್ಲೂಕು ಬಿಜೆಪಿ ಮುಖಂಡರಾದ ಪ್ರಮಿಳಾ ವರದರಾಜು, ಕಸಾಪ ಅಧ್ಯಕ್ಷ ಎಂ.ಕೆ. ಹರಿಚರಣ್‌ತಿಲಕ್, ಯುವಪ್ರಶಸ್ತಿ ಪುರಸ್ಕೃತರಾದ ಮಾದಾಪುರ ಸೋಮಶೇಖರ್, ಚಿಕ್ಕಗಾಡಿಗನಹಳ್ಳಿ ಪರಮೇಶ್, ಶಿಕ್ಷಣ ಸಂಯೋಜಕರಾದ ಕೆ.ಸಿ.ಮಂಜುನಾಥ್, ಬಿ.ಟಿ.ಮಸಳಿ, ಸೂರ್ಯನಾರಾಯಣ ಮತ್ತಿತರರು ಉಪಸ್ಥಿತರಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT