ಮಂಗಳವಾರ, ಜೂನ್ 22, 2021
28 °C
ನಗರಸಭೆ ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಶಾಸಕ ಎಚ್.ಹಾಲಪ್ಪ ಹರತಾಳು

ಮಾರಿಕಾಂಬಾ ಜಾತ್ರೆ: ಸುಗಮ ಸಂಚಾರಕ್ಕೆ ಸೂಚನೆ

 ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ನಗರದಲ್ಲಿ ಫೆ.18ರಿಂದ 9 ದಿನಗಳ ಕಾಲ ನಡೆಯಲಿರುವ ಮಾರಿಕಾಂಬಾ ಜಾತ್ರೆಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವುದರಿಂದ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಎಚ್.ಹಾಲಪ್ಪ ಹರತಾಳು ಸೂಚಿಸಿದ್ದಾರೆ.

ಇಲ್ಲಿನ ನಗರಸಭೆ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಗ್ರಾಮೀಣ ಪ್ರದೇಶಗಳಿಂದ ಜಾತ್ರೆಗೆ ಬರುವವರಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು. ಜಾತ್ರೆ ಸಂದರ್ಭದಲ್ಲಿ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡುವ ಜೊತೆಗೆ ಈ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು’ ಎಂದು ಹೇಳಿದರು.

ಜಾತ್ರೆ ಮುಗಿಸಿ ಮನೆಗೆ ಮರಳುವವರಿಗೆ ಕಡಿಮೆ ದರದಲ್ಲಿ ನಗರ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಕಾನೂನು ಸುವ್ಯವಸ್ಥೆ, ವಿದ್ಯುತ್, ನೀರು ಪೂರೈಕೆ ಮೊದಲಾದ ವಿಷಯಗಳಲ್ಲಿ ಲೋಪವಾಗದಂತೆ ಎಚ್ಚರ ವಹಿಸುವಂತೆ ಸಲಹೆ ನೀಡಿದರು.

ಉಪವಿಭಾಗಾಧಿಕಾರಿ ಡಾ.ನಾಗರಾಜ್ ಎಲ್., ನಗರಸಭೆ ಪೌರಾಯುಕ್ತ ಎಸ್.ರಾಜು, ಅಭಿಯಂತರ ಎಚ್.ಕೆ.ನಾಗಪ್ಪ, ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್, ಸಬ್ ಇನ್‌ಸ್ಪೆಕ್ಟರ್ ಸಾಗರ್‌ಕರ್, ಮೆಸ್ಕಾಂನ ಚಂದ್ರಶೇಖರ್, ಮಾರಿಕಾಂಬಾ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ನಗರಸಭೆ ಸದಸ್ಯ ಟಿ.ಡಿ.ಮೇಘರಾಜ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು