ದೈಹಿಕ ನ್ಯೂನತೆಯುಳ್ಳ ಮಕ್ಕಳ ಮೌಲ್ಯಾಂಕನ ಶಿಬಿರ

7

ದೈಹಿಕ ನ್ಯೂನತೆಯುಳ್ಳ ಮಕ್ಕಳ ಮೌಲ್ಯಾಂಕನ ಶಿಬಿರ

Published:
Updated:
Deccan Herald

ರಾಮನಗರ: ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ದೈಹಿಕ ನ್ಯೂನತೆಯುಳ್ಳ ಮಕ್ಕಳ ಮೌಲ್ಯಾಂಕನ ಶಿಬಿರವು ಇಲ್ಲಿನ ಗುರುಭವನದಲ್ಲಿ ಬುಧವಾರ ನಡೆಯಿತು.

ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಅಂಗವಿಕಲರ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ಶಿಬಿರದಲ್ಲಿ ತಾಲ್ಲೂಕಿನ ನೂರಾರು ಮಕ್ಕಳು ಹಾಗೂ ಅವರ ಪೋಷಕರು ಪಾಲ್ಗೊಂಡರು. ದೃಷ್ಟಿ, ಶ್ರವಣ ದೋಷವುಳ್ಳವರು, ಬೌದ್ಧಿಕ ವಿಕಲತೆ, ಮಂದ ದೃಷ್ಟಿ, ಕುಬ್ಜತೆ, ಕಲಿಕಾ ನ್ಯೂನತೆ, ಆಟಿಸಂ, ಬಹುವಿಧ ಅಂಗವಿಕಲತೆ ಸೇರಿದಂತೆ ಒಟ್ಟು 21 ಬಗೆಯ ಸಮಸ್ಯೆಯುಳ್ಳ ಮಕ್ಕಳನ್ನು ತಜ್ಞ ವೈದ್ಯರು ಪರೀಕ್ಷಿಸಿದರು. ಅವರಿಗೆ ಅವತ್ಯವಾದ ಪ್ರಮಾಣಪತ್ರ ಹಾಗೂ ಆರೋಗ್ಯ ಸಲಹೆಯನ್ನು ಕಾರ್ಯಕ್ರಮದಲ್ಲಿ ನೀಡಲಾಯಿತು.

ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ, ಇಂತಹ ಸಮಸ್ಯೆಯುಳ್ಳ ಮಕ್ಕಳನ್ನು ಪೋಷಕರು ಕಾರ್ಯಕ್ರಮಕ್ಕೆ ಕರೆ ತಂದಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್. ಮರಿಗೌಡ, ಕ್ಷೇತ್ರ ಸಮನ್ವಯಾಧಿಕಾರಿ ಜಿ.ಎಸ್. ಸಂಪತ್‌ಕುಮಾರ್ ನೇತೃತ್ವ ವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !