ಶಿವಮೊಗ್ಗ: ಔಷಧ ಅಂಗಡಿಗಳು ಬಂದ್

7

ಶಿವಮೊಗ್ಗ: ಔಷಧ ಅಂಗಡಿಗಳು ಬಂದ್

Published:
Updated:
Deccan Herald

ಶಿವಮೊಗ್ಗ: ಆನ್‌ಲೈನ್ ಮೂಲಕ ಔಷಧ ವಹಿವಾಟು ವಿರೋಧಿಸಿ ಜಿಲ್ಲೆಯಲ್ಲೂ ಶುಕ್ರವಾರ ಔಷಧ ಅಂಗಡಿಗಳನ್ನು ಬಂದ್ ಮಾಡಲಾಗಿತ್ತು. ಮಾಲೀಕರು ಮತ್ತು ನೌಕರರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಆನ್‌ಲೈನ್ ಮೂಲಕ ಔಷಧ ವ್ಯಾಪಾರಕ್ಕೆ ಉತ್ತೇಜನ ನೀಡಿದರೆ ಸಾಂಪ್ರದಾಯಿಕವಾಗಿ ಅದೇ ವೃತ್ತಿ ಮಾಡಿಕೊಂಡು ಬಂದವರಿಗೆ ಅನ್ಯಾಯವಾಗುತ್ತದೆ. ಸಾಕಷ್ಟು ಬಂಡವಾಳ ಹಾಕಿ ಅಂಗಡಿ ತೆರೆದು ಔಷಧ ವ್ಯಾಪಾರ ನಡೆಸುತ್ತಿರುವ ಲಕ್ಷಾಂತರ ಕುಟುಂಬಗಳು ಬೀದಿಗೆ ಬರುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆನ್‌ಲೈನ್ ಔಷಧ ಖರೀದಿಸಿದರೆ ರೋಗಿಗಳಿಗೆ ಸಮರ್ಪಕ ಮಾಹಿತಿ ದೊರೆಯುವುದಿಲ್ಲ. ವಿರೋಧದ ಮಧ್ಯೆಯೂ ಕೇಂದ್ರ ಸರ್ಕಾರ ಆನ್‌ಲೈನ್ ಮೂಲಕ ಔಷಧ ವ್ಯವಹಾರ ಕಾನೂನುಬದ್ದಗೊಳಿಸಲು ಮುಂದಾಗಿದೆ. ಇದು ಸರಿಯಲ್ಲ ಎಂದು ದೂರಿದರು.

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !