ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾನ ಮನಸ್ಕ ಶಾಸಕರ ಸಭೆ: ಯತ್ನಾಳ

Last Updated 14 ಫೆಬ್ರುವರಿ 2020, 17:44 IST
ಅಕ್ಷರ ಗಾತ್ರ

ವಿಜಯಪುರ: ‘ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಮುಕ್ತವಾಗಿ ಮಾತನಾಡಲುಅವಕಾಶ ನೀಡಬೇಕು. ಇಲ್ಲವಾದಲ್ಲಿ ಸಮಾನ ಮನಸ್ಕ ಶಾಸಕರು ಸಭೆ ಸೇರಿ ಚರ್ಚಿಸುತ್ತೇವೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಎಷ್ಟು ಜನ ಶಾಸಕರು ಎಂದು ಈಗಲೇ ಹೇಳುವುದಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಸಿ, ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ ಸಲ್ಲಿಸುತ್ತೇವೆ’ ಎಂದರು.

‘ಬಜೆಟ್ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ. ಮುಂದಿನ 3–4 ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ’ ಎಂದರು.

‘ಉತ್ತರ ಕರ್ನಾಟಕ ಎಂದರೆ ಹುಬ್ಬಳ್ಳಿ–ಧಾರವಾಡ ಮಾತ್ರ ಅಲ್ಲ. ಇನ್ವೆಸ್ಟ್‌ ಕರ್ನಾಟಕವನ್ನು ಹುಬ್ಬಳ್ಳಿ ಬದಲು ಉತ್ತರ ಕರ್ನಾಟಕದ ಬೇರೆ ಜಿಲ್ಲೆಗಳಲ್ಲಿ ಮಾಡಬಹುದಿತ್ತು. ಬರೀ ಹುಬ್ಬಳ್ಳಿ-ಧಾರವಾಡಕ್ಕೆ ಯೋಜನೆಗಳನ್ನು ತಂದರೆ ಹೇಗೆ? ಕಲಬುರ್ಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೂ ಯೋಜನೆಗಳನ್ನು ತರಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT