ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ವಾಜಪೇಯಿ ಬಡಾವಣೆ ಗ್ರಹಣಕ್ಕೆ ಶೀಘ್ರ ಮುಕ್ತಿ

ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಭರವಸೆ
Last Updated 4 ಮೇ 2020, 12:12 IST
ಅಕ್ಷರ ಗಾತ್ರ

ಶಿವಮೊಗ್ಗ: ಹಗರಣಗಳ ಕಾರಣ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಶಿವಮೊಗ್ಗ ಮಲ್ಲಿಗೇನಹಳ್ಳಿ ವ್ಯಾಪ್ತಿಯ ವಾಜಪೇಯಿ ಬಡಾವಣೆಸ್ಥಿತಿಗತಿ ಕುರಿತುಸಮಗ್ರ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಕಾನೂನು ಸಚಿವರ ಜತೆ ಚರ್ಚಿಸಿ, ಸೂಕ್ತ ಕ್ರಮಕೈಗೊಳ್ಳಲಾಗುವುದುಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜುಭರವಸೆ ನೀಡಿದರು.

ಶಿವಮೊಗ್ಗದಲ್ಲಿ ಸೋಮವಾರ ನಡೆದನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‍ಸಿಟಿ ಯೋಜನೆಗಳ ಪ್ರಗತಿ ಪರಿಶೀಲನೆಯ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ವಾಜಪೇಯಿ ಬಡಾವಣೆ ನಿವೇಶನ ಹಂಚಿಕೆ ಪ್ರಕರಣ ಲೋಕಾಯುಕ್ತರ ಮುಂದಿದೆ. ಬಡಾವಣೆ ಹಂಚಿಕೆಯ ಸಂಪೂರ್ಣ ವಿವರ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ಸೂಚಿಸಲಾಗಿದೆ. ನಂತರ ಅಡ್ವೊಕೇಟ್ ಜನರಲ್ ಅವರ ಜತೆಸಮಾಲೋಚನೆ ನಡೆಸಲಾಗುವುದು ಎಂದರು.

ಸ್ಮಾರ್ಟ್ ಕಾಮಗಾರಿಗೆ 2ವರ್ಷಗಳ ಗಡುವು

ನಗರೋತ್ಥಾನ ಯೋಜನೆಯಡಿ ಶಿವಮೊಗ್ಗ ನಗರ ಪಾಲಿಕೆಗೆ ಬಿಡುಗಡೆ ಮಾಡಿರುವ 125 ಕೋಟಿ ರು.ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ.ಶಿವಮೊಗ್ಗ ನಗರದಲ್ಲಿ ದಿನ 24 ಗಂಟೆ ಕುಡಿಯುವ ನೀರು ಪೂರೈಸುವ ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಬೇಕು. ಆಗಸ್ಟ್ ವೇಳೆಗೆ ಟೆಂಡರ್ ಅವಧಿ ಮುಗಿಯುತ್ತಿದ್ದರೂ, ಯೋಜನೆ ಕುಂಟುತ್ತಾ ಸಾಗಿದೆ.ನಿಗದಿತ ಅವದಿಯ ಒಳಗೆಯೋಜನೆ ಪೂರ್ಣಗೊಂಡು ನೀರು ಪೂರೈಸದಿದ್ದರೆಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು.ಒಳಚರಂಡಿ ಕಾಮಗಾರಿಯೂ ಪೂರ್ಣಗೊಂಡಿಲ್ಲ.ಮುಂದಿನ ಮಳೆಗಾಲದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಎಲ್ಲಾ ಕಾಮಗಾರಿಗಳು ಮುಂದಿನ ಎರಡು ವರ್ಷಗಳ ಒಳಗೆಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.

ಬೆಂಗಳೂರಿನಲ್ಲಿ ಸಭೆ

ಶಿವಮೊಗ್ಗ ನಗರ ಪಾಲಿಕೆಗೆ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಬೆಂಗಳೂರಿನಲ್ಲಿ ಜನಪ್ರತಿನಿಧಿಗಳುಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆಯಲಾಗುವುದು. ಮುಂದಿನ ತಿಂಗಳು ಶಿವಮೊಗ್ಗಕ್ಕೆ ಮತ್ತೆ ಎರಡು ದಿನಗಳು ಭೇಟಿನೀಡಿ ಪರಿಶೀಲಿಸಲಾಗುವುದು ಎಂದರು.

ಪ್ರಸ್ತಾವನೆ ಸಲ್ಲಿಕೆ

ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ125 ಕೋಟಿ ರು. ಮೊತ್ತದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಬೇಕು. ಕಳೆದ ಎರಡು ವರ್ಷಗಳ ಎಸ್‍ಎಫ್‍ಸಿ ವಿಶೇಷ ಅನುದಾನ20 ಕೋಟಿ ರು.ಬಿಡುಗಡೆ ಮಾಡಬೇಕು. ಕೈಗಾರಿಕಾ ಅಭಿವೃದ್ಧಿ ವಸಾಹತು ಬಡಾವಣೆಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ10 ಕೋಟಿ ರು. ಎಸ್‍ಎಫ್‍ಸಿ ಮುಕ್ತ ನಿಧಿಯ 4ನೇ ಕಂತು, ಸ್ವಚ್ಛ ಭಾರತ ಮಿಷನ್ ಅಡಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ2.38 ಕೋಟಿ ರು. ಬಿಡುಗಡೆ ಮಾಡಬೇಕು. ಅ ನಿವೇಶನರಹಿತರು ಮನೆಗಳನ್ನು ನಿರ್ಮಿಸಿರುವ 975 ಪ್ರಕರಣಗಳನ್ನು ಸಕ್ರಮಗೊಳಿಸಬೇಕು ಎಂದು ಪಾಲಕೆಯಿಂದ ಸಚಿವರಿಗೆ ಪ್ರಸ್ತಾವ ಸಲ್ಲಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಮೇಯರ್ ಸುವರ್ಣಾಶಂಕರ್,ವಿಧಾನ ಪರಿಷತ್ ಸದಸ್ಯರಾದ ಆರ್.ಪ್ರಸನ್ನ ಕುಮಾರ್, ಆಯನೂರು ಮಂಜುನಾಥ್‌,ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT