ಶುಕ್ರವಾರ, ಆಗಸ್ಟ್ 12, 2022
23 °C

ಹರಕು ಬಾಯಿ: ಈಶ್ವರಪ್ಪಗೆ ಶಾಸಕ ಯತ್ನಾಳ ತಿರುಗೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ‘ಹರಕು ಬಾಯಿ ಯಾರದ್ದು ಅಂತ ನಮಗೆ ಚನ್ನಾಗಿ ಗೊತ್ತಿದೆ’ ಎಂದು ಫೇಸ್‌ಬುಕ್‌ನಲ್ಲಿ ಕಿಡಿಕಾರಿದ್ದಾರೆ.

ತಮ್ಮ ಬೆಂಬಲಿಗರೊಬ್ಬರು ಫೇಸ್‌ಬುಕ್‌ನಲ್ಲಿ ಬರೆದಿರುವ ಹೇಳಿಕೆಯನ್ನು ತಮ್ಮ ಫೇಸ್‌ಬುಕ್‌ಗೆ ಟ್ಯಾಗ್ ಮಾಡಿಕೊಂಡಿದ್ದಾರೆ.

‘ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವುದಾದರೆ ನಿಮ್ಮನ್ನು ಮಾ...’ ಎಂದು ಬರೆದುಕೊಂಡಿರುವ ಬೆಂಬಲಿಗರ ಹೇಳಿಕೆಯನ್ನು ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಸಾಕಷ್ಟು ಪರವಾದ ಹೇಳಿಕೆಗಳು ವ್ಯಕ್ತವಾಗಿವೆ.


ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಫೇಸ್‌ಬುಕ್‌ನಲ್ಲಿ ಟ್ಯಾಗ್‌ ಮಾಡಿಕೊಂಡಿದ್ದ ಪೋಸ್ಟರ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು