ಭಾನುವಾರ, ಜನವರಿ 26, 2020
28 °C

ಶಾಸಕರ ಕಾರಿಗೆ ಇನ್ನೊಂದು ಕಾರು ಡಿಕ್ಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ವಿಜಯಪುರ: ನಿಡಗುಂದಿ ತಾಲ್ಲೂಕು ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ–50ರಲ್ಲಿ ಬುಧವಾರ ಕಲಬುರ್ಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಇನ್ನೊಂದು ಕಾರು ಡಿಕ್ಕಿ ಹೊಡೆದಿದೆ.

‘ಶಾಸಕರ ಕಾರಿಗೆ ಅಡ್ಡವಾಗಿ ಬಂದ ಬೈಕ್ ಅನ್ನು ತಪ್ಪಿಸಲು ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾರೆ. ಹೀಗಾಗಿ, ಹಿಂಬದಿಯಿಂದ ಬಂದ ಕಾರು ಶಾಸಕರ ಕಾರಿಗೆ ಡಿಕ್ಕಿ ಹೊಡೆದಿದೆ. ಯಾವುದೇ ಅಪಾಯವಾಗಿಲ್ಲ’ ಎಂದು ಎನ್‌ಟಿಪಿಸಿ ಪೊಲೀಸ್ ಠಾಣೆ ಮೂಲಗಳು ತಿಳಿಸಿವೆ.

ಆಲಮಟ್ಟಿಯಲ್ಲಿ ಬೆಳಿಗ್ಗೆ ಆಯೋಜಿಸಿದ್ದ ಕರ್ನಾಟಕ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸಭೆಯಲ್ಲಿ ಪಾಲ್ಗೊಳ್ಳಲು ಇವರು ಕಲಬುರ್ಗಿಯಿಂದ ಆಲಮಟ್ಟಿಗೆ ತೆರಳುತ್ತಿದ್ದರು.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು