ಮಂಗಳವಾರ, ಮಾರ್ಚ್ 2, 2021
31 °C

‘ಮಲ್ಲಮ್ಮಳ ಆದರ್ಶ ಸ್ತ್ರೀಕುಲಕ್ಕೆ ಮಾದರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಮೋಕ್ಷ ಪಡೆಯಲು ಲೌಕಿಕ ಪ್ರಪಂಚವನ್ನು ತ್ಯಾಗ ಮಾಡದೇ, ಸಂಸಾರದಲ್ಲಿದ್ದುಕೊಂಡೇ ಸದ್ಗತಿ ಹೊಂದಿದಳು’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಭವನದಲ್ಲಿ ಭಾನುವಾರ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 598 ನೇ ಜಯಂತಿಯಲ್ಲಿ ಅವರು ಮಾತನಾಡಿದರು.

ಮಲ್ಲಮ್ಮ ಜೀವನವಿಡಿ ಕಷ್ಟಗಳನ್ನುಂಡರೂ ತನಗೆ ನೋವುಂಟು ಮಾಡಿದವರ ಹಿತವನ್ನು ಬಯಸಿದರು. ಮನೆಯ ಒಡತಿಯಾಗಿದ್ದರೂ ದಾಸಿಯಂತೆ ಸೇವೆ ಸಲ್ಲಿಸಿ ಎಂತಹ ಕಷ್ಟದಲ್ಲಿಯೂ ಶಿವನನ್ನು ಸ್ಮರಿಸುತ್ತಿದ್ದರು ಎಂದರು.

ಪರಿಷತ್ತಿನ ಪದಾಧಿಕಾರಿಯಾದ ದಾಕ್ಷಾಯಿಣಿ ಬಿರಾದಾರ ಮಾತನಾಡಿ, ಮಹಾಶಿವಶರಣೆಯಾಗಿ ಬೆಳಗಿದ ಹೇಮರಡ್ಡಿ ಮಲ್ಲಮ್ಮ 12ನೇ ಶತಮಾನದ ಶಿವಶರಣೆಯರಂತೆ ವಚನಗಳನ್ನು ರಚಿಸಲಿಲ್ಲವಾದರೂ ಅವರ ಬದುಕೇ ಒಂದು ಬೃಹತ್ ವಚನ ಸಂಪುಟದಂತಿದೆ. ಅವರ ಜೀವನಮೌಲ್ಯಗಳು ಮನುಕುಲಕ್ಕೆ ಅದರಲ್ಲೂ ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಗಳಾಗಿವೆ ಎಂದರು.

ಪರಿಷತ್ತಿನ ಪದಾಧಿಕಾರಿಗಳಾದ ರಂಗನಾಥ ಅಕ್ಕಲಕೋಟ, ಎಸ್.ಡಿ.ಮಾದನ ಶೆಟ್ಟಿ, ಎಂ.ಆರ್.ಕಬಾಡೆ, ಎಸ್.ವೈ.ನಡುವಿನಕೇರಿ, ಪಂಡಿತರಾವ್‌ ಪಾಟೀಲ್, ಶಿವಲಿಂಗ ಕಿಣಗಿ ಶಂಕರ ಸಾತಪುತೆ ಹಾಗೂ ವಿಠ್ಠಲ್ ನಡುವಿನಮನಿ ಉಪಸ್ಥಿತರಿದ್ದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು