ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ತಾಣಗಳ ಪೋಸ್ಟ್‌ ಮೇಲೆ ನಿಗಾ

Last Updated 6 ಆಗಸ್ಟ್ 2022, 4:43 IST
ಅಕ್ಷರ ಗಾತ್ರ

ಕೊಪ್ಪಳ: ರಾಜ್ಯದ ಕರಾವಳಿ ಭಾಗದಲ್ಲಿ ಅಹಿತಕರ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾಮಾಜಿಕ ತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕುವವರ ಮೇಲೆ ಜಿಲ್ಲಾ ಪೊಲೀಸರು ನಿಗಾ ವಹಿಸಿದ್ದಾರೆ.

ಸಾಮಾಜಿಕ ತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಗುಂಪುಗಳ ನಡುವೆ ದ್ವೇಷ ಭಾವನೆ ಕೆರಳಿಸುವ ಪೋಸ್ಟ್‌ಗಳನ್ನು ಹಾಕುವವರು ಮತ್ತು ಫಾರ್ವರ್ಡ್‌ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ವಾಟ್ಸ್‌ ಆ್ಯಪ್‌ ಗ್ರೂಪ್‌ಗಳ ಅಡ್ಮಿನ್‌ಗಳು ಹಾಗೂ ಬಳಕೆದಾರರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ.

ಹಿಂದಿನ ಮೂರು ವರ್ಷಗಳ ಅವಧಿಯಲ್ಲಿ ದ್ವೇಷ ಮತ್ತು ಪ್ರಚೋದನಕಾರಿಯಾಗಿ ಸಂದೇಶ ರವಾನಿಸಿದ ವಿಷಯಗಳಲ್ಲಿ ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಅವರ ವಿರುದ್ಧ ರೌಡಿ ಶೀಟರ್‌ ಖಾತೆ ತೆರೆದು ನಿರಂತರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT