ಭಾನುವಾರ, ಜೂನ್ 13, 2021
22 °C

₹ 5 ಲಕ್ಷ ಮೌಲ್ಯದ 8 ಬೈಕ್‌ಗಳ ವಶ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಬ್ಬರು ಬೈಕ್‌ ಕಳ್ಳರನ್ನು ಬಂಧಿಸಿದ ಸಿಸಿಬಿ ಪೊಲೀಸರು, ₹ 5 ಲಕ್ಷ ಬೆಲೆ ಬಾಳುವ 8 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಜಾಫರ್‌ ಸೇಠ್‌ ನಗರದ ನರ್ಮ್‌ ಅಪಾರ್ಟ್‌ಮೆಂಟ್‌ ಬಳಿಯ ನಿವಾಸಿ, ವೆಲ್ಡಿಂಗ್‌ ಮತ್ತು ಪ್ಯಾಬ್ರಿಕೇಷನ್‌ ಕೆಲಸ ಮಾಡುವ ಸುಹೇಲ್ ಪಾಷ (18), ಉದಯಗಿರಿಯ ಛಾಯಾದೇವಿ ನಗರದ ನಿವಾಸಿ, ಹಣ್ಣಿನ ಅಂಗಡಿಯ ಕೆಲಸಗಾರ ಶೋಹೆಬ್ ಖಾನ್ (19) ಬಂಧಿತರು.

ಎನ್‌.ಆರ್.ಮೊಹಲ್ಲಾದ ತಿಬ್ಬಾದೇವಿ ಚಿತ್ರಮಂದಿರದ ಬಳಿ ಶುಕ್ರವಾರ ಸಂಜೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಈ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿಗಳಿಬ್ಬರು ₹ 5 ಲಕ್ಷ ಮೌಲ್ಯದ 8 ಹೊಂಡಾ ಡಿಯೋ ಬೈಕ್‌ಗಳನ್ನು ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕನೊಂದಿಗೆ ಸೇರಿ ಮೈಸೂರು ನಗರದ ವಿವಿಧ ಸ್ಥಳಗಳಲ್ಲಿ ಕಳವು ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ. ವಿಜಯನಗರ, ಹೆಬ್ಬಾಳ ವ್ಯಾಪ್ತಿಯಲ್ಲಿ ತಲಾ 3 ಬೈಕ್ ಕದ್ದಿದ್ದರೆ, ಸರಸ್ವತಿಪುರಂ ವ್ಯಾಪ್ತಿಯಲ್ಲಿ 2 ಬೈಕ್ ಕಳವು ಮಾಡಿದ್ದಾರೆ ಎಂದು ಸಿಸಿಬಿ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು