ಗುರುವಾರ , ಜೂಲೈ 9, 2020
28 °C

ಅತಿಕ್ರಮಣ: ₹ 10 ಕೋಟಿ ಮೌಲ್ಯದ ಸ್ವತ್ತು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ದೇವನೂರು ಎರಡನೇ ಹಂತ ಬಡಾವಣೆಯಲ್ಲಿ ಅತಿಕ್ರಮಣಗೊಂಡಿದ್ದ ಮುಡಾ ಆಸ್ತಿಯನ್ನು ಮಂಗಳವಾರ ತೆರವುಗೊಳಿಸಲಾಗಿದೆ.

ಸೈಯದ್ ಹಸೀಬ್ ಎಂಬುವರು ಅತಿಕ್ರಮಣ ಮಾಡಿಕೊಂಡಿದ್ದರು. ಮಂಗಳವಾರ ಉದಯಗಿರಿ ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು, ಸಿಬ್ಬಂದಿ ಸ್ವತ್ತುಗಳನ್ನು ತಮ್ಮ ವಶಕ್ಕೆ ಪಡೆದು ಪ್ರಾಧಿಕಾರದ ಆಸ್ತಿ ಎಂದು ನಾಮಫಲಕ ಅಳವಡಿಸಿದರು.

ಗ್ರಾಮದ ಸರ್ವೆ ನಂಬರ್ 166/1, 166/2, 164ರಲ್ಲಿ ರಚಿಸಲಾಗಿದ್ದ ಒಟ್ಟು 14 ನಿವೇಶನಗಳನ್ನು ಪ್ರಾಧಿಕಾರವು ಸಂರಕ್ಷಿಸುವ ನಿಟ್ಟಿನಲ್ಲಿ ಕ್ರಮ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಅಂದಾಜು ಮೌಲ್ಯ ₹ 10 ಕೋಟಿಗಳಾಗಿದೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.