ಮೈಸೂರು: ‘ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (ಕೆಎಸ್‌ಒಯು) ಈ ಶೈಕ್ಷಣಿಕ ವರ್ಷದಿಂದ 11 ಹೊಸ ಕೋರ್ಸ್‌ಗಳನ್ನು ಆರಂಭಿಸಲಿದೆ’ ವಿ.ವಿ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ತಿಳಿಸಿದರು.
ಕೆಎಸ್‌ಒಯು ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿ.ವಿ ಉನ್ನತಿಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
‘ಹೊಸ ಕೋರ್ಸ್‌ಗಳನ್ನು ಆರಂಭಿಸಲು ವಿ.ವಿ ಸಲ್ಲಿಸಿದ್ದ ಪ್ರಸ್ತಾವಕ್ಕೆ ಯುಜಿಸಿ ತಜ್ಞರ ಸಮಿತಿ ಒಪ್ಪಿಗೆ ನೀಡಿದೆ. ಯುಜಿಸಿಯಿಂದ ಅಧಿಕೃತ ಪತ್ರವಷ್ಟೇ ಬರಬೇಕಿದೆ. ಸಸ್ಯವಿಜ್ಞಾನ, ಪ್ರಾಣಿ ವಿಜ್ಞಾನ, ಆಹಾರ ವಿಜ್ಞಾನ, ಮಾಹಿತಿ ತಂತ್ರಜ್ಞಾನ ವಿಷಯಗಳಲ್ಲಿ ಎಂ.ಎಸ್ಸಿ ಪದವಿ, ಬಿ.ಎಸ್ಸಿ (ಜನರಲ್), ಮಾಹಿತಿ ತಂತ್ರಜ್ಞಾನ ಮತ್ತು ಗೃಹ ವಿಜ್ಞಾನ ವಿಷಯಗಳಲ್ಲಿ ಬಿ.ಎಸ್ಸಿ ಪದವಿ, ಬಿಬಿಎ, ಬಿಸಿಎ, ತೆಲುಗು ಹಾಗೂ ಶಿಕ್ಷಣ ವಿಷಯಗಳಲ್ಲಿ ಎಂ.ಎ ಕೋರ್ಸ್‌ಗಳನ್ನು ಆರಂಭಿಸಲಾಗುವುದು ಎಂದರು.
‘ವಿ.ವಿ ವತಿಯಿಂದ ಇದೀಗ ಒಟ್ಟು 42 ಕೋರ್ಸ್‌ಗಳನ್ನು ನೀಡಲಾಗುತ್ತಿದೆ. ಹೊಸದಾಗಿ ಕೋರ್ಸ್‌ಗಳನ್ನು ಆರಂಭಿಸಲು ಯುಜಿಸಿ ಮತ್ತೆ ಅರ್ಜಿ ಆಹ್ವಾನಿಸಿದ್ದು, ಎಂಎಸ್‌ಡಬ್ಲ್ಯು ಮತ್ತು ಬಿಎಸ್‌ಡಬ್ಲ್ಯು ಒಳಗೊಂಡಂತೆ ಇನ್ನೂ ಐದು ಹೊಸ ಕೋರ್ಸ್‌ಗಳನ್ನು ಆರಂಭಿಸಲು ಅರ್ಜಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
‘ವಿ.ವಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದೆ. 2020ರ ಜುಲೈನಲ್ಲಿ 22 ಸಾವಿರ ಮಂದಿ, 2021ರ ಜನವರಿಯಲ್ಲಿ 7 ಸಾವಿರ ಮಂದಿ ಪ್ರವೇಶ ಪಡೆದುಕೊಂಡಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ 40 ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿರೀಕ್ಷೆಯಿದೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.