ಮಂಗಳವಾರ, ಜುಲೈ 27, 2021
27 °C

ನಿರ್ಬಂಧದಲ್ಲಿ ಸಡಿಲಕೆ ಇಲ್ಲ; ನಿಷೇಧಾಜ್ಞೆ ಮುಂದುವರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಕೋವಿಡ್‌ ಹರಡುವುದನ್ನು ತಡೆಯಲು ಹೇರಲಾಗಿದ್ದ ನಿರ್ಬಂಧಗಳನ್ನು ಜೂನ್ 21ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 5ರ ಬೆಳಿಗ್ಗೆ 6 ಗಂಟೆಯವರೆಗೆ ಮುಂದುವರಿಸಲಾಗಿದ್ದು, ಯಾವುದೇ ನಿರ್ಬಂಧವೂ ನಗರದಲ್ಲಿ ಸಡಿಲಿಕೆಯಾಗಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.

ದಿನಸಿ, ಹಣ್ಣು, ತರಕಾರಿ ಅಂಗಡಿಗಳನ್ನು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ತೆರೆಯಬೇಕು. ಈ ಅವಧಿಯಲ್ಲಿ ಸಾರ್ವಜನಿಕರು ತಮ್ಮ ಮನೆಯ ಸಮೀಪ ಇರುವ ಅಂಗಡಿಗಳಿಂದ ಮಾತ್ರವೇ ಖರೀದಿಸಲು ಹೊರಬರಬೇಕು. ಈ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಅಂಗಡಿಗಳು ತೆರೆದರೆ ಅಂಗಡಿ ಮಾಲೀಕರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಿಷೇಧಾಜ್ಞೆ ಮುಂದುವರಿಕೆ:

ಕೋವಿಡ್ ಹರಡುವುದನ್ನು ತಡೆಯಲು ಹೊರಡಿಸಲಾಗಿದ್ದ ನಿಷೇಧಾಜ್ಞೆಯನ್ನು ಜೂನ್ 21ರ ಬೆಳಿಗ್ಗೆ 6 ಗಂಟೆಯಿಂದ ಜುಲೈ 05ರ ಬೆಳಿಗ್ಗೆ 6 ಗಂಟೆಯವರೆಗೆ ಮುಂದುವರಿಸಿ ಆದೇಶ ಹೊರಡಿಸಲಾಗಿದೆ.

ಯಾವುದೇ ಕಾರಣಕ್ಕೂ 5 ಮಂದಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ಪರಸ್ಪರ 6 ಅಡಿ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಬೇಕು, ಅನಗತ್ಯವಾಗಿ ಯಾರೂ ಮನೆಯಿಂದ ಹೊರಬರಬಾರದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

225 ವಾಹನಗಳ ವಶ

ಪೊಲೀಸರು ಭಾನುವಾರ ನಗರದಲ್ಲಿ 225 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಇವುಗಳಲ್ಲಿ 196 ದ್ವಿಚಕ್ರ ವಾಹನಗಳು, 20 ಕಾರುಗಳು, 9 ಆಟೊಗಳು ಇವುಗಳಲ್ಲಿ ಸೇರಿವೆ. ಇದೇ ಬಗೆಯ ಬಿಗಿಯಾದ ತಪಾಸಣಾ ಕಾರ್ಯಗಳು ನಡೆಯಲಿದೆ ಎಂದು ಅವರು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು