ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಜಿಲ್ಲೆಯ 197 ಮಂದಿ ಕೋವಿಡ್‌ನಿಂದ ಗುಣಮುಖ

Last Updated 2 ನವೆಂಬರ್ 2020, 2:04 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌ನಿಂದ 197 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 1,582ಕ್ಕೆ ಇಳಿಕೆಯಾಗಿದೆ.

ಇದೇ ವೇಳೆ 147 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಒಟ್ಟು ಪ್ರಕರಣಗಳ ಸಂಖ್ಯೆ 47,831ಕ್ಕೆ ತಲುಪಿದೆ.

768 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 129 ಮಂದಿ, ಖಾಸಗಿ ಆಸ್ಪತ್ರೆಗಳಲ್ಲಿ 438 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 51, ಖಾಸಗಿ ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 81, ಕೋವಿಡ್‌ ಕೇರ್‌ ಕೇಂದ್ರದಲ್ಲಿ 97, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 18 ಮಂದಿ ಆರೈಕೆ ಪಡೆಯುತ್ತಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 93 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 39 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 3 ಹಾಗೂ ಇತರ 12 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಒಬ್ಬರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ 959ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆಯ ಭಾನುವಾರದ ವರದಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT