ಭಾನುವಾರ, ಆಗಸ್ಟ್ 1, 2021
25 °C
ದಾಸನಕೊಪ್ಪಲು, ನಂಜರಾಜಯ್ಯನಹುಂಡಿ, ಕೆ.ಸಾಲುಂಡಿ, ಧನಗಹಳ್ಳಿಯಲ್ಲಿ ಅಭಿವೃದ್ಧಿ ಕಾಮಗಾರಿ

ಜಯಪುರ: ₹3.30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಯಪುರ: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜಯಪುರ ಹೋಬಳಿಯ ದಾಸನಕೊಪ್ಪಲು, ನಂಜರಾಜಯ್ಯನಹುಂಡಿ, ಕೆ.ಸಾಲುಂಡಿ ಹಾಗೂ ಧನಗಹಳ್ಳಿ ಗ್ರಾಮಗಳಲ್ಲಿ₹3.30 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಟಿ.ದೇವೇಗೌಡ ಬುಧವಾರ ಚಾಲನೆ ನೀಡಿದರು.

ದಾಸನಕೊಪ್ಪಲು ಗ್ರಾಮದಲ್ಲಿ ₹1 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ. ಜತೆಗೆ ಮುಡಾ ವತಿಯಿಂದ ₹50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ ನಡೆಸಲಾಗುತ್ತದೆ. ಕೆ.ಸಾಲುಂಡಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ರಸ್ತೆ, ಚರಂಡಿ ಕಾಮಗಾರಿ, ನಂಜರಾಜಯ್ಯನಹುಂಡಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ.

ಧನಗಹಳ್ಳಿ ಗ್ರಾಮದಲ್ಲಿ ₹50 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ₹10 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ, ₹10 ಲಕ್ಷ ವೆಚ್ಚದಲ್ಲಿ ಬಸವ ಭವನ ನಿರ್ಮಾಣ ಕಾಮಗಾರಿ, ₹10 ಲಕ್ಷ ವೆಚ್ಚದಲ್ಲಿ ಧನಗಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯಲಿವೆ.

‘ಗುಣಮಟ್ಟದ ಕಾಮಗಾರಿ ನಡೆಸಬೇಕು. ಕಾಮಗಾರಿಗಳಲ್ಲಿ ಲೋಪದೋಷ ಕಂಡುಬಂದರೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿ.ಟಿ.ದೇವೇಗೌಡ ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಕೋಟೆಹುಂಡಿ ಮಹದೇವು, ಮಾಕಿ ಮಹದೇವು, ಕಲ್ಲಿಪಾಳ್ಯ ರಮೇಶ್, ದಾಸನಕೊಪ್ಪಲು ಗ್ರಾಮದ ಮುಖಂಡರಾದ ಶಂಭೂಗೌಡ, ದೇವರಾಜು, ರಾಜು, ಜಯರಾಂ, ಸುರೇಶ್, ಕೆ.ಸಾಲುಂಡಿ ಗ್ರಾಮದ ಯಜಮಾನರಾದ ಸ್ವಾಮಿಗೌಡ, ಕೆಂಚೇಗೌಡ, ಚಿಕ್ಕಣ್ಣ, ಪಚ್ಚೇಗೌಡ, ಕೇರ್ಗಳ್ಳಿ ಬಸವೇಗೌಡ, ನಂಜರಾಜಯ್ಯನಹುಂಡಿ ಪ್ರಕಾಶ್, ಗೋಪಾಲ ರಾಜೇ ಅರಸ್, ಧನಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾಲಕ್ಷ್ಮಿ, ಉಪಾಧ್ಯಕ್ಷೆ ಲೀಲಾವತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು