ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಚಿರತೆಗಳ ಅನುಮಾನಾಸ್ಪದ ಸಾವು

Last Updated 4 ಜೂನ್ 2021, 3:14 IST
ಅಕ್ಷರ ಗಾತ್ರ

ನಂಜನಗೂಡು/ ಎಚ್‌.ಡಿ.ಕೋಟೆ: ಮೈಸೂರು ಜಿಲ್ಲೆಯ ನಂಜನಗೂಡು ಹಾಗೂ ಎಚ್‌.ಡಿ.ಕೋಟೆ ತಾಲ್ಲೂಕಿ
ನಲ್ಲಿ ಮೂರು ಚಿರತೆಗಳು ಅನುಮಾನಾಸ್ಪದವಾಗಿ ಮೃತಪಟ್ಟಿವೆ.

ನಂಜನಗೂಡು ತಾಲ್ಲೂಕಿನ ಕಡಬೂರು ಗ್ರಾಮದ ರಾಮನಾಯ್ಕ ಎಂಬುವವರ ಜಮೀನಿನಲ್ಲಿ, ಅಂದಾಜು ನಾಲ್ಕು ವರ್ಷ ಪ್ರಾಯದ ತಾಯಿ ಹಾಗೂ ಮೂರ್ನಾಲ್ಕು ತಿಂಗಳ ಮರಿ ಚಿರತೆ ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು, ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಗುರುವಾರ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

ಚಿರತೆಗಳ ಕಳೇಬರಗಳ ವೈದ್ಯಕೀಯ ಪರೀಕ್ಷೆಯನ್ನು ಪಶು ವೈದ್ಯಾಧಿಕಾರಿ ಡಾ.ಶಿವಕುಮಾರ್ ನಡೆಸಿದರು. ಶ್ವಾನದಳ ಸ್ಥಳಕ್ಕೆ ಭೇಟಿ ನೀಡಿ ಶೋಧಿಸಿತು. ನಂತರ, ಸ್ಥಳದಲ್ಲಿಯೇ ಕಳೇಬರ ಸುಡಲಾಯಿತು.

‘ತಾಯಿ–ಮರಿ ಚಿರತೆ ಮಂಗಳವಾರವೇ ಮೃತಪಟ್ಟಿವೆ. ಇದು ಸಹಜ ಸಾವಲ್ಲ. ಅನುಮಾನವಿದೆ. ಗುರುವಾರ ಬೆಳಿಗ್ಗೆಯೇ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮರಣೋತ್ತರ ಪರೀಕ್ಷೆ ನಡೆಸಿದರು. ಮೃತದೇಹದ ಅಂಗಾಂಗಳಲ್ಲಿನ ಕೆಲವೊಂದು ಮಾದರಿ ತೆಗೆದು ಪರೀಕ್ಷೆಗಾಗಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ’ ಎಂದು ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್‌ ಪ್ರಶಾಂತ್‌ಕುಮಾರ್‌ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಎಚ್.ಡಿ. ಕೋಟೆ ತಾಲ್ಲೂಕಿನ ನಾಗನಹಳ್ಳಿ ಗ್ರಾಮದ ಕಳಸಯ್ಯನವರ ಜಮೀನಿನಲ್ಲಿ 5 ವರ್ಷದ ಗಂಡು ಚಿರತೆ ಮೃತಪಟ್ಟಿದೆ. ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ, ಮೇಟಿಕುಪ್ಪೆ ವನ್ಯಜೀವಿ ವಲಯದ ಸಮೀಪದಲ್ಲಿ, ಸಾಮಾಜಿಕ ಅರಣ್ಯ ವ್ಯಾಪ್ತಿಗೆ ಸೇರಿದ ಸ್ಥಳದಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ.

ವನ್ಯಜೀವಿ ಪಶುವೈದ್ಯ ಡಾ. ಮುಜೀಬ್‌ ರೆಹಮಾನ್ ಮರಣೋತ್ತರ ಪರೀಕ್ಷೆ ನಡೆಸಿದ್ದು, ಅಂಗಾಂಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT