ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

374 ಮಂದಿ ಗುಣಮುಖ; 372 ಜನರಿಗೆ ಸೋಂಕು

ಕೋವಿಡ್‌ನಿಂದ 13 ಸಾವು; 5 ಸಾವಿರ ಗಡಿ ದಾಟಿದ ಸೋಂಕಿತರು
Last Updated 3 ಆಗಸ್ಟ್ 2020, 15:54 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯ ವ್ಯಾಪ್ತಿಯಲ್ಲಿ ಸೋಮವಾರ ಕೋವಿಡ್‌ನಿಂದ ಗುಣಮುಖರಾದವರು, ಸೋಂಕಿತರಾದವರ ಸಂಖ್ಯೆಯಲ್ಲಿ ಸ್ವಲ್ಪವೇ ವ್ಯತ್ಯಾಸವಿದೆ. ಪೀಡಿತರಿಗಿಂತ ಗುಣಮುಖರ ಸಂಖ್ಯೆಯೇ ತುಸು ಹೆಚ್ಚಿದೆ.

374 ಜನರು ಸೋಂಕಿನಿಂದ ಗುಣಮುಖರಾದರೆ, ಹೊಸದಾಗಿ 372 ಮಂದಿ ಪೀಡಿತರಾಗಿದ್ದಾರೆ. ಸೋಂಕಿತರ ಸಂಖ್ಯೆ ಐದು ಸಾವಿರದ ಗಡಿ ದಾಟಿದರೆ, ಗುಣಮುಖರಾದವರ ಸಂಖ್ಯೆ 2 ಸಾವಿರದ ಗಡಿ ದಾಟಿದೆ.

ಜಿಲ್ಲಾಡಳಿತ ಸೋಮವಾರ 13 ಮಂದಿಯ ಸಾವನ್ನು ದೃಢಪಡಿಸಿದೆ. ಇವರೆಲ್ಲರೂ ಬೇರೆ ಬೇರೆ ದಿನ ಮೃತಪಟ್ಟವರು. 8 ಜನರು ಪುರುಷರಿದ್ದರೆ, ಐವರು ಮಹಿಳೆಯರು. ಎಲ್ಲರೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದವರೇ. ಜೊತೆಗೆ ವಿವಿಧ ಅನಾರೋಗ್ಯಕ್ಕೀಡಾಗಿದ್ದವರು. ಇಬ್ಬರಷ್ಟೇ ಉಸಿರಾಟ ಸಮಸ್ಯೆ ಹೊಂದಿಲ್ಲದವರು ಎಂಬುದನ್ನು ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.

ಕೋವಿಡ್‌ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ದಿನವೇ ನಾಲ್ವರು ಸ್ಪಂದಿಸದೆ ಮೃತಪಟ್ಟಿದ್ದಾರೆ. ದಾಖಲಾದ ಮರು ದಿನ ಇಬ್ಬರು ಮೃತಪಟ್ಟಿದ್ದಾರೆ. ಉಳಿದವರು 3, 4, 6, 7, 10 ದಿನ ಚಿಕಿತ್ಸೆ ಪಡೆದರೂ, ಗುಣಮುಖರಾಗದೆ ನಿಧನರಾಗಿದ್ದಾರೆ. ಜಿಲ್ಲೆಯಲ್ಲಿ ಮೃತರ ಸಂಖ್ಯೆ 174 ತಲುಪಿದೆ.

ಸೋಮವಾರ ಸೋಂಕಿತರಾದ 372 ಮಂದಿಯಲ್ಲಿ 202 ಜನರು ಪೀಡಿತರ ಸಂಪರ್ಕಿತರು. ಶೀತ ಜ್ವರದ (ಐಎಲ್‌ಐ) ಲಕ್ಷಣಗಳಿಂದ 94 ಜನರು ಬಳಲುತ್ತಿದ್ದಾರೆ. ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಬಂದ 58 ಮಂದಿಯಲ್ಲೂ ಸೋಂಕು ಪತ್ತೆಯಾಗಿದೆ. 18 ಜನರಲ್ಲಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪೀಡಿತರ ಸಂಖ್ಯೆ 5192ಕ್ಕೆ ಏರಿದ್ದು, 2952 ಜನರು ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ. 231 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರೆ, 711 ಜನರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಆರೈಕೆಯಲ್ಲಿದ್ದಾರೆ. 76 ಮಂದಿ ಹೆಲ್ತ್‌ ಕೇರ್‌ ಸೆಂಟರ್‌ಗೆ ದಾಖಲಾಗಿದ್ದಾರೆ.

ಮನೆಯಲ್ಲೇ 1667 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ತಮ್ಮ ನಿವಾಸಗಳಲ್ಲೇ ಐಸೋಲೇಷನ್‌ ಆಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 226 ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದು, 41 ಜನರು ಖಾಸಗಿ ಕೋವಿಡ್ ಕೇರ್ ಸೆಂಟರ್‌ಗೆ ಆರೈಕೆಗಾಗಿ ದಾಖಲಾಗಿದ್ದಾರೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು–5192,ಸಕ್ರಿಯ ಪ್ರಕರಣ–2952, ಗುಣಮುಖ–2066, ಸಾವು–174

ದಿನದ ಏರಿಕೆ–372, ಗುಣಮುಖ–374, ಸಾವು–13

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT