ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವರಾಜ ಮಾರುಕಟ್ಟೆ ನಾಳೆಯಿಂದ 4 ದಿನ ಸ್ಥಗಿತ

Last Updated 18 ಆಗಸ್ಟ್ 2020, 5:28 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ನಗರವೂ ಸೇರಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಮುಂಜಾಗ್ರತೆಯ ಕ್ರಮವಾಗಿ ಮತ್ತು ಜನಸಂದಣಿ ನಿಯಂತ್ರಣಕ್ಕಾಗಿ, ಗೌರಿ–ಗಣೇಶ ಹಬ್ಬದ ಅಂಗವಾಗಿ ಆ.19ರಿಂದ 22ರವರೆಗೆ 4 ದಿನ ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆಡಳಿತ ಆದೇಶ ಹೊರಡಿಸಿದೆ.

ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರಸ್ಥರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಈ ನಾಲ್ಕು ದಿನ ಜೀವರಾಯನಕಟ್ಟೆ ಮೈದಾನದಲ್ಲಿ (ಜೆ.ಕೆ. ಗ್ರೌಂಡ್) ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಂಸದ ಅಂಗಡಿ ಬಂದ್ 22ಕ್ಕೆ

ಮೈಸೂರು: ಗಣೇಶ ಚತುರ್ಥಿ ಪ್ರಯುಕ್ತ ಆ.22ರ ಶನಿವಾರ ಮೈಸೂರು ಮಹಾನಗರ ಪಾಲಿಕೆಗೆ ಒಳಪಟ್ಟ ಕುರಿ, ಮೇಕೆ, ದನ, ಎಮ್ಮೆ, ಕೋಳಿ ಮಾಂಸ, ಹಂದಿ ಮಾಂಸ, ಮತ್ತು ಮೀನು ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಲು ಆದೇಶ ನೀಡಲಾಗಿದೆ ಎಂದು ಮಹಾನಗರ ಪಾಲಿಕೆಯ ಪಶುವೈದ್ಯಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT