ಮಂಗಳವಾರ, ಫೆಬ್ರವರಿ 18, 2020
29 °C

ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷ?: ಸತೀಶ್ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮೈಸೂರು: ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಸೃಷ್ಟಿ ಬಗ್ಗೆ ಚಿಂತನೆ ನಡೆದಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಭಾನುವಾರ ಹೇಳಿದರು.

ಜಾತಿ ಮತ್ತು ಪ್ರದೇಶವಾರು ಸಮತೋಲನ ಮಾಡಲು ಈ ಚಿಂತನೆ ನಡೆದಿದೆ. ಇನ್ನೊಂದು ವಾರದಲ್ಲಿ ಇದು ಬಹಿರಂಗವಾಗಲಿದೆ.  ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿಳಂಬವಾಗಿದೆಯಷ್ಟೇ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ನಲ್ಲಿ ಮೂಲ, ವಲಸಿಗ ಎಂಬ ಪ್ರಶ್ನೆಯೇ ಇಲ್ಲ. ನಾನು ಪಕ್ಷ ಸೇರಿ 10 ವರ್ಷವಾಗಿದೆ ಎಂದರು.

ಬೇಗ ಸಚಿವರಾಗಲಿ: ರಮೇಶ್ ಜಾರಕಿಹೊಳಿ ಸೇರಿದಂತೆ ಅನೇಕರು ಸಚಿವ‌ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಅವರ ಆಸೆ ಬೇಗ ಈಡೇರಲಿ ಎಂದು ಸತೀಶ್ ಕುಟುಕಿದರು.

ಸಚಿವರಾಗಬೇಕು ಎಂಬ ಆಸೆಗೆ ಕುಮಾರಸ್ವಾಮಿ ಸರ್ಕಾರವನ್ನು ಬೀಳಿಸಿ ಶತ ಪ್ರಯತ್ನ ಮಾಡಿದ್ದಾರೆ. ಯಡಿಯೂರಪ್ಪ ಅವರೆಲ್ಲರ ಆಸೆಯನ್ನು ಪೂರೈಸಲಿ ಎನ್ನುವುದೇ ನನ್ನ ಆಶಯ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು