ಗುರುವಾರ , ಮೇ 26, 2022
31 °C

ಮಳೆಯಿಂದ ಮೈಸೂರು ಜಿಲ್ಲೆಯಲ್ಲಿ 500 ಹೆಕ್ಟೇರ್‌ ಬೆಳೆ ನಾಶ: ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಸತತ ಮಳೆಯಿಂದ ಮೈಸೂರು ಜಿಲ್ಲೆಯಲ್ಲಿ ಇದುವರೆಗೆ 500 ಹೆಕ್ಟೇರ್‌ ಬೆಳೆ ನಾಶವಾಗಿದ್ದು, ಮೂವರು ಮೃತರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘1,907 ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. 87 ಮನೆಗಳಿಗೆ ಸಂಪೂರ್ಣ ಹಾನಿ ಆಗಿದೆ. ಗ್ರಾಮಾಂತರ ಪ್ರದೇಶದಲ್ಲಿ 500 ಕಿ.ಮೀ., ನಗರ ಪ್ರದೇಶದಲ್ಲಿ 1,100 ಕಿ.ಮೀ. ರಸ್ತೆ ಹಾಳಾಗಿವೆ. 67 ಶಾಲಾ ಕಟ್ಟಡ, 33 ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಕಟ್ಟಡಗಳಿಗೆ ಹಾನಿ ಉಂಟಾಗಿದೆ. 130 ವಿದ್ಯುತ್‌ ಕಂಬಗಳು ಬಿದ್ದಿವೆ’ ಎಂದು ಮಾಹಿತಿ ನೀಡಿದರು.

ಚಾಮುಂಡಿಬೆಟ್ಟದಲ್ಲಿ ಉಂಟಾಗಿರುವ ರಸ್ತೆ ಕುಸಿತದ ಕಾಮಗಾರಿಯನ್ನು ₹ 9.5 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಮಳೆ ನಿಂತ ಮೇಲೆ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

‘ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮಾಹಿತಿ ರವಾನಿಸಲಾಗಿದೆ. ಮುಖ್ಯಮಂತ್ರಿ ಕೂಡ ನೇರವಾಗಿ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದಾರೆ. ಭಾನುವಾರ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ವಿಶೇಷ ಅನುದಾನಕ್ಕೆ ಮನವಿ ಮಾಡುತ್ತೇನೆ. ಸದ್ಯದಲ್ಲೇ ಬೆಳೆ ನಷ್ಟ ಪರಿಹಾರವನ್ನೂ ನೀಡಲಿದ್ದಾರೆ. ಶಿಥಿಲಗೊಂಡ ಕಟ್ಟಡಗಳ ಸಮೀಕ್ಷೆ ನಡೆಸಿ ಮಾಹಿತಿ ಸಲ್ಲಿಸಲಾಗಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು