ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಾಲ ಮನ್ನಾ ವಿಚಾರ: ರೈತರೊಂದಿಗೆ ಸಿಎಂ ಕುಮಾರಸ್ವಾಮಿ ಸಭೆ

30 ಜಿಲ್ಲೆಗಳ ರೈತರು ಭಾಗಿ; ಯಶಸ್ವಿನಿ ಯೋಜನೆ ಮುಂದುವರಿಸಲು ಸರ್ಕಾರ ನಿರ್ಧಾರ
Last Updated 30 ಮೇ 2018, 11:05 IST
ಅಕ್ಷರ ಗಾತ್ರ

ಬೆಂಗಳೂರು: ರೈತರ ಸಾಲ ಮನ್ನಾ ಸಂಬಂಧ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 30 ಜಿಲ್ಲೆಗಳ ರೈತ ಸಂಘಟನೆಗಳ ಪ್ರತಿನಿಧಿಗಳು ಮತ್ತು ಪ್ರಗತಿಪರ ರೈತರ ಜೊತೆ ಬುಧವಾರ ಸಭೆ ನಡೆಸುತ್ತಿದ್ದಾರೆ.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿ ಅನೇಕ ಶಾಸಕರು, ಅಧಿಕಾರಿಗಳು ಭಾಗಿಯಾಗಿದ್ದಾರೆ.

‘ಚುನಾವಣೆ ಪೂರ್ವದಲ್ಲಿ ನೀಡಿದ ಮಾತಿನಂತೆ ನಡೆಯುತ್ತೇವೆ, ಹಿಂದೆ ಸರಿಯುವ ಮಾತಿಲ್ಲ. ಡಿಸಿಎಂ ಪರಮೇಶ್ವರ ಮತ್ತು ನಾನು ಇಬ್ಬರೂ ಈ ಕುರಿತು ಚರ್ಚಿಸಿದ್ದೇವೆ’ ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

‘ನಗರ ಪ್ರದೇಶದ ಅಭಿವೃದ್ಧಿಯ ಹಣವನ್ನು ರೈತರ ಸಾಲ ಮನ್ನಾಗಾಗಿ ಬಳಕೆಯಾಗಲಿದೆ. ಅದರಿಂದ ಬೆಂಗಳೂರಿನ ನಾಗರಿಕರ ಅಭಿವೃದ್ಧಿಗೆ ಹಿನ್ನಡೆಯಾಗಲಿದೆ ಎಂಬುದು ಸರಿಯಲ್ಲ.ಖಜಾನೆಯೂ ಭದ್ರವಾಗಿರಲಿದೆ ಹಾಗೂ ರೈತರ ಸಾಲ ಮನ್ನಾ ಕೂಡ ಆಗಲಿದೆ’ ಎಂದು ಭರವಸೆ ವ್ಯಕ್ತಪಡಿಸಿದರು.

ಎರಡು ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ 10 ರೈತರ ಕುರಿತು ಪೂರ್ಣ ವರದಿ ಪಡೆದಿದ್ದೇನೆ ಎಂದರು.

ಇದು ರೈತರ, ಜನರ ಸರ್ಕಾರ. ಕಾಂಗ್ರೆಸ್‌–ಜೆಡಿಎಸ್‌ ಸರ್ಕಾರ ಅಲ್ಲ.

ಸಾವಿಗೀಡಾಗಿರುವ ರೈತ ಮುಖಂಡರು ಹಾಗೂ ರೈತರಿಗೆ ಮೌನಾಚರಿಸುವ ಮುಖೇನ ಗೌರವ ಸೂಚಿಸಲಾಯಿತು.

ಯಶಸ್ವಿನಿ ಯೋಜನೆ ಮೇ 30 ಮುಗಿದಿದೆ. ಯಶಸ್ವಿ ಯೋಜನೆ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಕುಮಾರಸ್ವಾಮಿ ಹೇಳಿದರು.

ರೈತರ ಮಾತು:

* ಪ್ರಕೃತಿ ವಿಕೋಪ, ಬರಗಾಲ, ಅರ್ಧ ಬೆಲೆಗೆ ಬೆಳೆ ಮಾರಾಟದಿಂದ ರೈತರು ನಷ್ಟ ಅನುಭವಿಸುತ್ತಿದ್ದೇವೆ. ಯಾವತ್ತಿಗೂ ಯಾರನ್ನೂ ಬೇಡದ ರೈತ ಕುಲವು ಈಗ ಸಾಲ ಮನ್ನಾ ಬೇಡಿಕೆ ಮುಂದಿಡುತ್ತಿದ್ದೇವೆ. ದೊಡ್ಡ, ಸಣ್ಣ ಎಲ್ಲ ರೈತರ ಸಾಲ ಮನ್ನಾ ಆಗಬೇಕು.

1.14 ಲಕ್ಷ ಕೋಟಿ ಸಾಲ ಮನ್ನಾ ಮಾಡಬೇಕು. ಕೇಂದ್ರ ಸರ್ಕಾರ ಕೂಡ ಇದರಲ್ಲಿ ಪಾಲು ತೆಗೆದುಕೊಳ್ಳಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು.

ಕೇಂದ್ರ ಸರ್ಕಾರವು ಇದರಲ್ಲಿ ಜವಾಬ್ದಾರಿ ವಹಿಸದಿದ್ದರೆ, ಕೇಂದ್ರದ ವಿರುದ್ಧವೂ ಪ್ರತಿಭಟನೆ ಮಾಡಬೇಕಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT