ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ನೀರಿನಲ್ಲಿ ಮುಳುಗಿ 6 ಜನ ಸಾವು

Last Updated 22 ಏಪ್ರಿಲ್ 2021, 13:47 IST
ಅಕ್ಷರ ಗಾತ್ರ

ಮೈಸೂರು: ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ಸೇರಿದಂತೆ ಒಟ್ಟು ಆರು ಮಂದಿ ಗುರುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿಯ ಹೆಮ್ಮಿಗೆ-ಬಿ ಗ್ರಾಮದ ನಾಲ್ವರು ಬಾಲಕರು ಈಜಲು ಹೋಗಿದ್ದಾಗ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಪ್ರೌಢಶಾಲಾ ವಿದ್ಯಾರ್ಥಿಗಳಾದ ಯಶವಂತ (15), ಮಹದೇವಪ್ರಸಾದ್ (14), ಪರಶಿವಮೂರ್ತಿ (15), ಕಿಶೋರ್ (13) ಮೃತಪಟ್ಟವರು.

ಯಶವಂತ, ಮಹದೇವಪ್ರಸಾದ್ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ ಎಂದು ತಲಕಾಡು ಪೊಲೀಸರು ತಿಳಿಸಿದ್ದಾರೆ. ನದಿ ದಡದಲ್ಲಿ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಸಮೀಪದ ನಾರ್ತ್‌ಬ್ಯಾಂಕ್‌ ಗ್ರಾಮದ ಕಾಳಮ್ಮನ ದೇವಾಲಯಕ್ಕೆ ಗುರುವಾರ ಪೂಜೆಗೆ ಬಂದಿದ್ದ ಹುಣಸೂರು ತಾಲ್ಲೂಕಿನ ಮಲ್ಲಿನಾಥಪುರ ಗ್ರಾಮದ ಬಸವೇಗೌಡ (26), ಸಣ್ಣೇಗೌಡ (34)‌ ವಿಶ್ವೇಶ್ವರಯ್ಯ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ದೇವರ ದರ್ಶನಕ್ಕೂ ಮುನ್ನ ಪಕ್ಕದಲ್ಲೇ ಹರಿಯುತ್ತಿದ್ದ ನಾಲೆಯಲ್ಲಿ ಈಜಲು ಇಳಿದಿದ್ದಾರೆ. ವಿಶ್ವೇಶ್ವರಯ್ಯ ನಾಲೆಯಲ್ಲಿ 2,500 ಕ್ಯೂಸೆಕ್‌ ನೀರು ಹರಿಯುತ್ತಿದ್ದು, ನೀರಿನ ರಭಸಕ್ಕೆ ತುಸು ದೂರ ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT