ಭಾನುವಾರ, ಆಗಸ್ಟ್ 1, 2021
27 °C

ಮಹಾರಾಣಿ ಕಾಲೇಜಿಗೆ ಶೇ 71 ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ನಗರದ ಮಹಾರಾಣಿ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ 71ರಷ್ಟು ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಕುಳಿತಿದ್ದ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ 782 ವಿದ್ಯಾರ್ಥಿಗಳಲ್ಲಿ 557 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ, 225 ವಿದ್ಯಾರ್ಥಿಗಳು ನಪಾಸಾಗಿದ್ದಾರೆ. ಪಾಸಾದವರಲ್ಲಿ 59 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದರೆ, 339 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಸೋಮಣ್ಣ ತಿಳಿಸಿದ್ದಾರೆ.

ವಿಜಯವಿಠಲ ಕಾಲೇಜಿಗೆ ಉತ್ತಮ ಫಲಿತಾಂಶ

ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಶೇ 98.31, ವಾಣಿಜ್ಯ ವಿಭಾಗದಲ್ಲಿ ಶೇ 98.95 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 297 ವಿದ್ಯಾರ್ಥಿಗಳಲ್ಲಿ 180 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 110 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕೆ.ಆರ್‌.ನಂದಿನಿ ವಿಜ್ಞಾನ ವಿಭಾಗದಲ್ಲಿ 600ಕ್ಕೆ 590 ಅಂಕ ಗಳಿಸಿದ್ದರೆ, ಎಸ್‌.ನಿಸರ್ಗ, ಸಿ.ಪಿ.ಸ್ಫೂರ್ತಿ 586, ಸಿಂಚನಾ, ಸ್ಕ್ಲೀಟಾ ಬುಥೆಲೋ, ವಿಭಾ ಜಯಶಂಕರ್ 585 ಅಂಕ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದ ಪರೀಕ್ಷೆಗೆ ಹಾಜರಾದ 96 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಉಳಿದಂತೆ 38 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಎಂಟು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ ಮೂವರು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಆತ್ರೇಯ ಟಿ.ಹೆಬ್ಬಾರ್ ವಾಣಿಜ್ಯ ವಿಭಾಗದಲ್ಲಿ 587 ಅಂಕ ಗಳಿಸಿದ್ದು, ಈತ ಸಂಸ್ಕೃತ ಮತ್ತು ವ್ಯವಹಾರ ಅಧ್ಯಯನದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾನೆ. ಅಪರ್ಣಾ ಗುಪ್ತಾ, ವೈಷ್ಣವಿ ಎ.ರಾಜ್ 581 ಅಂಕ ಗಳಿಸಿದರೆ, ಎಸ್‌.ನಾಗಶ್ರೀ 580 ಅಂಕ ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎಚ್.ಸತ್ಯಪ್ರಸಾದ್ ತಿಳಿಸಿದ್ದಾರೆ.

ಕುವೆಂಪು ನಗರದ ವಿದ್ಯಾವರ್ಧಕ ಸಂಘದ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೊನಾಲಿ ಮೊಸಳೆ 600ಕ್ಕೆ 550 ಅಂಕ ಗಳಿಸಿದ್ದಾರೆ. ಗೋಪಾಲಸ್ವಾಮಿ ಪದವಿ ಪೂರ್ವ ಕಾಲೇಜಿನ ಶರಣ್ಯ ರವಿಕುಮಾರ್ 554 ಅಂಕ ಗಳಿಸಿದ್ದಾನೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.