ಮೈಸೂರು: ಜಿಲ್ಲೆಯಲ್ಲಿ722 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, ಇದುವರೆಗೆ 27,393 ಮಂದಿ ಸೋಂಕಿನಿಂದ ಮುಕ್ತರಾದಂತಾಗಿದೆ.

ಹೊಸದಾಗಿ 101 ಮಂದಿಯಲ್ಲಿ ಕೋವಿಡ್ ದೃಢಪಟ್ಟಿದೆ. ಒಟ್ಟು ಸೋಂಕಿ ತರ ಸಂಖ್ಯೆ 34,619 ಕ್ಕೆ ಏರಿಕೆಯಾಗಿದೆ.

ರೋಗಿಗಳ ಸಂಪರ್ಕಕ್ಕೆ ಬಂದ 20 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 24 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ 9 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

ಜಿಲ್ಲೆಯಲ್ಲಿ ಇದೀಗ ಒಟ್ಟು 6,464 ಸಕ್ರಿಯ ಪ್ರಕರಣಗಳು ಇವೆ. 4,634 ಮಂದಿ ಮನೆಯಲ್ಲೇ ಐಸೊಲೇಷನ್ ಆಗಿದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 319, ಕೋವಿಡ್ ಚಿಕಿತ್ಸಾ ಕೇಂದ್ರದಲ್ಲಿ 83, ಕೋವಿಡ್ ಕೇರ್ ಕೇಂದ್ರದಲ್ಲಿ 589, ಖಾಸಗಿ ಕೋವಿಡ್ ಕೇರ್ ಕೇಂದ್ರದಲ್ಲಿ 237 ಹಾಗೂ ಖಾಸಗಿ ಆಸ್ಪತ್ರೆಯಲ್ಲಿ 612 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

25 ಸಾವು: ಆರೋಗ್ಯ ಇಲಾಖೆಯ ಗುರುವಾರದ ವರದಿ ಪ್ರಕಾರ ಜಿಲ್ಲೆಯಲ್ಲಿ ಕೋವಿಡ್‌ಗೆ ಮತ್ತೆ 25 ಮಂದಿ ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಬಿಟ್ಟು ಹೋಗಿದ್ದ ಅಂಕಿ–ಅಂಶವನ್ನು ಸೇರಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಲು ಕಾರಣ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. ಸಾವಿನ ಸಂಖ್ಯೆ 762ಕ್ಕೆ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.