ಶುಕ್ರವಾರ, ಸೆಪ್ಟೆಂಬರ್ 25, 2020
21 °C

ಮೈಸೂರು: 737 ಕೋವಿಡ್‌ ಪ್ರಕರಣ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ‌ಮಂಗಳವಾರ ಹೊಸದಾಗಿ 737 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 12 ಮಂದಿ ಮೃತಪಟ್ಟಿದ್ದಾರೆ.

ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ 18 ಸಾವಿರ ದಾಟಿದೆ. ಸದ್ಯ 5,299 ಸಕ್ರಿಯ ಪ್ರಕರಣಗಳು ಇವೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ ಮೃತರ ಒಟ್ಟು ಸಂಖ್ಯೆ 456ಕ್ಕೇರಿದೆ. 30, 48, 55 ವರ್ಷದ ಮಹಿಳೆಯರು, 62, 65, 79 ವರ್ಷದ ವೃದ್ಧೆಯರು, 45 ವರ್ಷದ ಇಬ್ಬರು ಪುರುಷರು, 60 ವರ್ಷದ ಇಬ್ಬರು ವೃದ್ಧರು, 73, 83 ವರ್ಷದ ವೃದ್ಧ ಮೃತಪಟ್ಟಿದ್ದಾರೆ.

ಇದುವರೆಗೆ ಲಕ್ಷಕ್ಕೂ ಅಧಿಕ ಮಂದಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಬುಧವಾರವೂ 12 ಕೇಂದ್ರಗಳಲ್ಲಿ ರ‍್ಯಾಪಿಡ್‌ ಆ್ಯಂಟಿಜೆನ್‌ ಟೆಸ್ಟ್‌ ಪರೀಕ್ಷೆ ನಡೆಸಲಾಗುತ್ತಿದೆ.

ಪ್ಲಾಸ್ಮಾ ಬ್ಯಾಂಕ್‌ ಸ್ಥಾಪಿಸುವ ಸಂಬಂಧ ಮುಖ್ಯಮಂತ್ರಿ ಜೊತೆ ಮಾತನಾಡಿದ್ದು, ಕೆಲವೇ ದಿನಗಳಲ್ಲಿ ಅದು ಸಾಕಾರಗೊಳ್ಳಲಿದೆ ಎಂದು ಶಾಸಕ ಎಸ್‌.ಎ.ರಾಮದಾಸ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು