ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: 95 ಮಂದಿಗೆ ಕೋವಿಡ್‌ ದೃಢ

Last Updated 10 ನವೆಂಬರ್ 2020, 5:08 IST
ಅಕ್ಷರ ಗಾತ್ರ

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 95 ಮಂದಿಗೆ ಕೋವಿಡ್‌ ದೃಢಪಟ್ಟಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 48,850 ಕ್ಕೆ ಏರಿಕೆಯಾಗಿದೆ

95 ಮಂದಿ ಗುಣಮುಖರಾಗಿದ್ದು, ಇದೀಗ 1,069 ಸಕ್ರಿಯ ಪ್ರಕರಣಗಳು ಇವೆ. ಆರೋಗ್ಯ ಇಲಾಖೆಯ ಸೋಮವಾರದ ವರದಿ ಪ್ರಕಾರ ಜಿಲ್ಲೆಯಲ್ಲಿ ಯಾವುದೇ ಸಾವು ದಾಖಲಾಗಿಲ್ಲ.

454 ಮಂದಿ ಮನೆಯಲ್ಲೇ ಐಸೊಲೇಷನ್‌ ಆಗಿದ್ದಾರೆ. ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 158 ಮಂದಿ, ಖಾಸಗಿ ಆಸ್ಪತ್ರೆಗಳಲ್ಲಿ 279 ಮಂದಿ, ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 56, ಖಾಸಗಿ ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ 71, ಕೋವಿಡ್‌ ಕೇರ್‌ ಕೇಂದ್ರದಲ್ಲಿ 40, ಖಾಸಗಿ ಕೋವಿಡ್‌ ಕೇರ್‌ ಕೇಂದ್ರದಲ್ಲಿ 11 ಮಂದಿ ಆರೈಕೆ ಪಡೆಯುತ್ತಿದ್ದಾರೆ.

ರೋಗಿಗಳ ಸಂಪರ್ಕಕ್ಕೆ ಬಂದ 75 ಮಂದಿ, ಶೀತ ಜ್ವರ ಮಾದರಿಯ ಅನಾರೋಗ್ಯ ಲಕ್ಷಣದಿಂದ (ಐಎಲ್‌ಐ) ಬಳಲುತ್ತಿದ್ದ 13 ಮಂದಿ, ತೀವ್ರ ಉಸಿರಾಟ ಸಮಸ್ಯೆಯಿಂದ (ಎಸ್‌ಎಆರ್‌ಐ) ಬಳಲುತ್ತಿದ್ದ ಇಬ್ಬರು ಹಾಗೂ ಇತರ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದುವರೆಗೆ 3,75,709 ಕೋವಿಡ್‌ ಪರೀಕ್ಷೆಗಳನ್ನು ಮಾಡಲಾಗಿದೆ. 7,171 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT