ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತ್ಯೇಕ ಅಪಘಾತ; 2 ಸಾವು

ಮಾನವೀಯತೆ ಮೆರೆದ ಕೆಪಿಟಿಸಿಎಲ್‌ ಸಿಬ್ಬಂದಿ
Last Updated 4 ಡಿಸೆಂಬರ್ 2020, 8:12 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಗುರುವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹುಣಸೂರು ರಸ್ತೆಯಲ್ಲಿ ಹಳ್ಳಕ್ಕೆ ಉರುಳಿ ಬಿದ್ದಿದ್ದ ಕಾರಿನಲ್ಲಿದ್ದ ಗಾಯಾಳುಗಳನ್ನು ಕೆಪಿಟಿಸಿಎಲ್‌ ನೌಕರರು ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಹುಣಸೂರು ರಸ್ತೆಯ ಪಡುವಾರಹಳ್ಳಿ ಸಮೀಪದ ಮೂಕಾಂಬಿಕಾ ಕನ್ವೆಂಕ್ಷನ್‌ ಹಾಲ್‌ ಬಳಿ ಗುರುವಾರ ನಸುಕಿನ 1.30ರ ಸಮಯದಲ್ಲಿ ಮೈಸೂರು ಕಡೆಗೆ ಅತಿ ವೇಗವಾಗಿ ಬಂದ ಕಾರೊಂದು ಎಡಭಾಗದ ಕಂಬಕ್ಕೆ ಡಿಕ್ಕಿ ಹೊಡೆದು, ಹಳ್ಳಕ್ಕೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ನಾಲ್ವರ ಪೈಕಿ ಚಿರಂಜೀವಿ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಗಾಯಗೊಂಡಿದ್ದಾರೆ.

ಉರುಳಿ ಬಿದ್ದಿದ್ದ ಕಾರಿನಲ್ಲಿದ್ದ ಗಾಯಾಳುಗಳನ್ನು ಸಮೀಪದಲ್ಲಿದ್ದ ಕೆಪಿಟಿಸಿಎಲ್‌ ನೌಕರರು ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿ.ವಿ ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಕೂಟರ್‌ಗೆ ಗುದ್ದಿದ ಕಾರು; ಮಹಿಳೆ ಸಾವು

ಶ್ರೀರಂಗಪಟ್ಟಣ ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಸ್ಕೂಟರ್‌ಗೆ ಸಿದ್ಧಲಿಂಗಪುರದ ಬಳಿ ಹಿಂದಿನಿಂದ ಬಂದ ಕಾರೊಂದು ಗುದ್ದಿದ ಪರಿಣಾಮ ಸ್ಕೂಟರ್‌ನ ಹಿಂಬದಿ ಕುಳಿತಿದ್ದ ಬಿ.ಜೆ.ಸರಸ್ವತಿ ಅವರು ಮೃತಪಟ್ಟಿದ್ದಾರೆ. ಸ್ಕೂಟರ್ ಚಾಲನೆ ಮಾಡುತ್ತಿದ್ದ ಇವರ ಸ್ನೇಹಿತೆ ಲಕ್ಷ್ಮೀ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್.ಆರ್.ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತ್ಯೇಕ ಘಟನೆ; ಇಬ್ಬರು ಆತ್ಮಹತ್ಯೆ

ಮೈಸೂರು: ಇಲ್ಲಿನ ಕುಂಬಾರಕೊಪ್ಪಲಿನ ನಿವಾಸಿ ಗೀತಾ (25) ಗುರುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇವರು 8 ವರ್ಷಗಳ ಹಿಂದೆ ರವಿ ಅವರನ್ನು ವಿವಾಹವಾಗಿದ್ದರು. ಇವರಿಗೆ ಇಬ್ಬರು ಮಕ್ಕಳು ಇದ್ದರು. ಅನಾರೋಗ್ಯದಿಂದ ಬೇಸರಗೊಂಡು ಇವರು ವಿಷ ಸೇವಿಸಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಹಾಕಿಕೊಂಡು ಸಾವು

ಜನತಾನಗರದ ನಿವಾಸಿ ರವಿಕುಮಾರ್ (21) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕಳೆದ 6 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸರಗೊಂಡಿದ್ದ ಇವರು ಗುರುವಾರ ಬೆಳಿಗ್ಗೆ ರೂಮಿನಲ್ಲಿ ಮಲಗುತ್ತೇನೆ ಎಂದು ಹೋಗಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸರಸ್ವತಿಪುರಂ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT