ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಶಿಕ್ಷೆ

ನಗರ ಪೊಲೀಸ್ ವೆಬ್‌ಸೈಟ್‌ನಲ್ಲಿ ‘ಬಿವೇರ್ ಶಾರ್ಕ್ಸ್’
Last Updated 4 ಮಾರ್ಚ್ 2020, 9:24 IST
ಅಕ್ಷರ ಗಾತ್ರ
ADVERTISEMENT
""

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸಂಗೀತ ಶಿಕ್ಷಕ ಸಿದ್ದರಾಜು ಎಂಬಾತನಿಗೆ ಪೋಕ್ಸೊ ವಿಶೇಷ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಈತ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದ ಲೈಂಗಿಕ ಕಿರುಕುಳದ ಕುರಿತು ಮುಖ್ಯ ಶಿಕ್ಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ಅವರು ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪ‌ಬ್ಲಿಕ್ ಪ್ರಾಸಿಕ್ಯೂಟರ್ ಬಿ.ಸಿ.ಶಿವರುದ್ರಸ್ವಾಮಿ ವಾದ ಮಂಡಿಸಿದ್ದರು.

‌ವಿಡಿಯೊ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಟೊ ಚಾಲಕ

ಮೈಸೂರು: ಇಲ್ಲಿನ ವಿ.ವಿ.ಮೊಹಲ್ಲಾ ನಿವಾಸಿ ಹಾಗೂ ಆಟೊ ಚಾಲಕ ಸಿದ್ದಾರ್ಥ (24) ಮಂಗಳವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಡುಗಿಯೊಬ್ಬಳು ಮೋಸ ಮಾಡಿದ್ದಾಳೆ ಎಂದು ಆರೋಪಿಸಿ ಇವರು ಆತ್ಮಹತ್ಯೆಗೂ ಮುನ್ನ ವಿಡಿಯೊ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿ.ವಿಪುರಂ ಠಾಣೆಯಲ್ಲಿ ದಾಖಲಾಗಿದೆ.

ನಗರ ಪೊಲೀಸ್ ವೆಬ್‌ಸೈಟ್‌ನಲ್ಲಿ ‘ಬಿವೇರ್ ಶಾರ್ಕ್ಸ್’

ಮೈಸೂರು: ನಗರ ಪೊಲೀಸ್ ಅಧಿಕೃತ ವೆಬ್‌ಸೈಟ್ http://mysorecitypolice.gov.in/ನ್ನು ತೆರೆದರೆ ‘ಬಿವೇರ್ ಶಾರ್ಕ್ಸ್’ ಎಂಬ ಬರಹ ಕಾಣಿಸಿಕೊಳ್ಳುತ್ತಿದೆ. ಇದು ‘ಹ್ಯಾಕ್’ ಆಗಿದೆಯೇ ಇಲ್ಲವೇ ಎಂಬುದು ಗೊತ್ತಾಗಿಲ್ಲ.

ಮೈಸೂರು ನಗರ ಪೊಲೀಸ್ ವೆಬ್‌ಸೈಟ್‌ನ್ನು ಮಂಗಳವಾರ ರಾತ್ರಿ ತೆರೆದಾಗ ಈ ಬರಹ ಕಾಣಿಸಿಕೊಂಡಿತು

ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಿಸಿಪಿ ಪ್ರಕಾಶ್‌ಗೌಡ, ‘ವೆಬ್‌ಸೈಟ್‌ ‘ಹ್ಯಾಕ್’ ಆಗಿರುವ ಕುರಿತು ಮಾಹಿತಿ ಇಲ್ಲ. ಈ ಕುರಿತು ಪರಿಶೀಲಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT