ಗುರುವಾರ , ಆಗಸ್ಟ್ 18, 2022
25 °C

ಆಷಾಢ: ದೇವಿಗೆ ವಿಶೇಷ ಅಲಂಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಇಲ್ಲಿನ ಕುವೆಂಪುನಗರದ ನ್ಯೂ ಕಾಂತರಾಜ ಅರಸ್ ರಸ್ತೆಯಲ್ಲಿರುವ ಬಂದಂತಮ್ಮ ಮತ್ತು ಕಾಳಮ್ಮ ದೇವಸ್ಥಾನ ಸೇವಾ ಸಮಿತಿಯಿಂದ ದೇವಸ್ಥಾನದಲ್ಲಿ ಆಷಾಢ ಶುಕ್ರವಾರಗಳಂದು ವಿಶೇಷ ಅಲಂಕಾರ ಹಾಗೂ ಪೂಜೆ ಹಮ್ಮಿಕೊಳ್ಳಲಾಗಿದೆ.

ಮೂರ್ತಿಯನ್ನು ಜುಲೈ 1ರಂದು ಕವಡೆ, 8ರಂದು ಬೆಣ್ಣೆ, 15ರಂದು ವರ್ಣ ಹಾಗೂ 22ರಂದು ಹತ್ತಿಯಿಂದ ಅಲಂಕಾರ ಮಾಡಲಾಗುವುದು. ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿತರಣೆ ಬೆಳಿಗ್ಗೆ 8ಕ್ಕೆ ನಡೆಯಲಿದ್ದು, ಸಂಜೆ 5ಕ್ಕೆ ಪ್ರಸಾದ ವಿತರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂಎ ಕೋರ್ಸ್‌ಗೆ ಅರ್ಜಿ
ಮೈಸೂರು:
ಭಾರತೀಯ ವೆಚ್ಚ ಲೆಕ್ಕಿಗರ ಸಂಸ್ಥೆ ಮೈಸೂರು ಕೇಂದ್ರವು ಸಿಎಂಎ (ಕಾಸ್ಟ್ ಅಂಡ್ ಮ್ಯಾನೇಜ್‌ಮೆಂಟ್ ಅಕೌಂಟ್ಸ್) ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ಜುಲೈ 31ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 0821–2331083 ಸಂಪರ್ಕಿಸಬಹುದು ಎಂದು ಅಧ್ಯಕ್ಷ ಆರ್.ಪುರುಷೋತ್ತಮ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಪಿಎ ಕೋರ್ಸ್‌ಗೆ ಅರ್ಜಿ ಆಹ್ವಾನ
ಮೈಸೂರು:
ಮೈಸೂರು ವಿಶ್ವವಿದ್ಯಾಲಯದ ಲಲಿತ ಕಲಾ ಕಾಲೇಜಿನಲ್ಲಿ ಎನ್‌ಇಪಿ–2020 ಅಡಿಯಲ್ಲಿ 2022–23ನೇ ಸಾಲಿನಲ್ಲಿ 3 ವರ್ಷದ ಬಿಪಿಎ ಪದವಿ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 0821–2419586 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.