ಬುಧವಾರ, ಮಾರ್ಚ್ 22, 2023
24 °C

ವಾಲ್ಮೀಕಿ ಜಯಂತಿಗೆ ಎಸ್‌.ಟಿ.ಸೋಮಶೇಖರ್‌ ಗೈರು: ಕ್ಷಮೆಯಾಚಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಜಿಲ್ಲಾಡಳಿತ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಗೈರಾಗಿರುವುದು ಖಂಡನೀಯ. ಇದಕ್ಕಾಗಿ ಸಚಿವರು ಕ್ಷಮೆ ಯಾಚಿಸಲೇಬೇಕು’ ಎಂದು ಕೆಪಿಸಿಸಿ ಪರಿಶಿಷ್ಟ ಪಂಗಡದ ಪ್ರಧಾನ ಕಾರ್ಯದರ್ಶಿ ಕ್ಯಾತನಹಳ್ಳಿ ನಾಗರಾಜು ಶುಕ್ರವಾರ ಇಲ್ಲಿ ಆಗ್ರಹಿಸಿದರು.

‘ಸಚಿವರು ಕ್ಷಮೆ ಯಾಚಿಸದಿದ್ದರೇ; ಅವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಕಪ್ಪುಪಟ್ಟಿ ಪ್ರದರ್ಶಿಸಲಾಗುವುದು’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.

‘ಪಕ್ಷಾತೀತವಾಗಿ ವಾಲ್ಮೀಕಿ ಸಮಾಜದ ಮುಖಂಡರು ಈ ವಿಷಯದಲ್ಲಿ ಸಭೆ ನಡೆಸಲಿದ್ದಾರೆ. ಸಚಿವರು ತಕ್ಷಣವೇ ನಮ್ಮ ಆಗ್ರಹಕ್ಕೆ ಸ್ಪಂದಿಸದಿದ್ದರೆ ಪ್ರತಿಭಟನೆ ಅನಿವಾರ್ಯ’ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು