ಬುಧವಾರ, ಸೆಪ್ಟೆಂಬರ್ 18, 2019
26 °C

ಅಪಘಾತ; ಐವರಿಗೆ ತೀವ್ರ ಗಾಯ

Published:
Updated:
Prajavani

ಹಂಪಾಪುರ: ಸಮೀಪದ ಹೊಮ್ಮರಗಳ್ಳಿ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ವಿಂಗರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ವಿಂಗರ್ ವಾಹನದಲ್ಲಿದ್ದ 5 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ಮೈಸೂರಿನಿಂದ ಎಚ್.ಡಿ.ಕೋಟೆಗೆ ವಿಂಗರ್ ವಾಹನ ಹಾಗೂ ಎಚ್.ಡಿ.ಕೋಟೆಯಿಂದ ಮೈಸೂರಿಗೆ ಬಸ್ ತೆರಳುತ್ತಿತ್ತು. ಈ ವೇಳೆ ಹೊಮ್ಮರಗಳ್ಳಿ ಸಮೀಪ ವಿಂಗರ್‌ ವಾಹನದ ಚಾಲಕ ಚೌಡನಾಯಕ ಅಡ್ಡಲಾಗಿ ಬಂದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ಸಿಗೆ ಡಿಕ್ಕಿಹೊಡೆದಿದ್ದಾನೆ. ಅಪಘಾತದಿಂದಾಗಿ ವಿಂಗರ್ ವಾಹನದ ಚಾಲಕ ಸೇರಿದಂತೆ 6 ಮಂದಿಗೆ ಗಾಯಗಳಾಗಿವೆ. ಚಾಲಕನನ್ನು ಹೊರತುಪಡಿಸಿ ಉಳಿದಂತೆ 5 ಮಂದಿಯ ಸ್ಥಿತಿ ಗಂಭೀರವಾಗಿರುವರಿಂದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿದೆ. ವಿಂಗರ್ ಚಾಲಕ ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Post Comments (+)