ಮಂಗಳವಾರ, ಅಕ್ಟೋಬರ್ 22, 2019
22 °C

ಕಾರು ಪಲ್ಟಿ: ವೈದ್ಯ ವಿದ್ಯಾರ್ಥಿ ಸಾವು

Published:
Updated:

ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ): ತಾಲ್ಲೂಕಿನ ಮೈಸೂರು ಮಾನಂದವಾಡಿ ಮುಖ್ಯರಸ್ತೆಯ ಸೋಗಹಳ್ಳಿ ಗೇಟ್ ಸಮೀಪ ಮಂಗಳವಾರ ಕಾರು ಪಲ್ಟಿ ಹೊಡೆದದ್ದರಿಂದ ಸ್ಥಳದಲ್ಲೇ ಯುವಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಮೈಸೂರು ಕಡೆಯಿಂದ ಕೇರಳಕ್ಕೆ ತೆರಳುತ್ತಿತ್ತು. ಅದರಲ್ಲಿದ್ದ ರುಪೈದ್ (21) ಸಾವನ್ನಪ್ಪಿದ್ದು, ಶಾಮಿಲ್, ಮುಸ್ತಾಕ್ ಹಾಗೂ ಸುಹೇಲ್ ಈ ಮೂವರಿಗೆ ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಇವರು ಮೂಲತಃ ಕೇರಳದ ಕಣ್ಣೂರು ಜಿಲ್ಲೆಯವರಾಗಿದ್ದು ಮಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು 7 ಯುವಕರು ಮೈಸೂರು ವೀಕ್ಷಣೆ ಮಾಡಲು ಬಂದಿದ್ದು ಮಂಗಳವಾರ ಕೇರಳಕ್ಕೆ ತೆರಳುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಎಸ್ಐ ರಾಮಚಂದ್ರ ನಾಯಕ, ಸಿಬ್ಬಂದಿ ನಾಗೇಗೌಡ, ವಿಶ್ವನಾಥ, ನಿಂಗರಾಜು, ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದರು. ಬೀಚನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)